ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ʼಕೃಷಿ ಪಂಡಿತ ಪ್ರಶಸ್ತಿʼ ನೀಡಲಾಗುತ್ತಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಇಚ್ಛಿಸುವವರು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.
ಆಸಕ್ತ ರೈತರು ಕೆ-ಕಿಸಾನ್ ಪೋರ್ಟಲ್‍ನ Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ ನಾಗರೀಕ ಸೇವಾಕೇಂದ್ರ/ ಸ್ವತಃ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID( Fruits Identification)ಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಕೃಷಿ ಪಂಡಿತ ಪ್ರಶಸ್ತಿಯ ಪ್ರಥಮ ಬಹುಮಾನದ ಮೊತ್ತ ರೂ. 125000, ದ್ವಿತೀಯ ರೂ. 100000, ತೃತೀಯ ರೂ.75000, ಕೃಷಿ ಪಂಡಿತ ಉದಯೋನ್ಮುಖ ರೂ. 50000 ನೀಡಲಾಗುತ್ತದೆ. ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ ಪಡೆದವರು ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ: ಮೂಡಬಿದಿರೆ | ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ: ಸುಸ್ಥಿರ ಪದ್ಧತಿಗಳ ಕುರಿತು ತಜ್ಞರಿಂದ ತರಬೇತಿ
ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
