ಮಂಗಳೂರು | ‘ಕೃಷಿ ಪಂಡಿತ ಪ್ರಶಸ್ತಿ’ಗೆ ರೈತರಿಂದ ಅರ್ಜಿ ಆಹ್ವಾನ

Date:

ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ʼಕೃಷಿ ಪಂಡಿತ ಪ್ರಶಸ್ತಿʼ ನೀಡಲಾಗುತ್ತಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಕೃಷಿ ಪಂಡಿತ ಪ್ರಶಸ್ತಿಗೆ ಇಚ್ಛಿಸುವವರು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಆಸಕ್ತ ರೈತರು ಕೆ-ಕಿಸಾನ್ ಪೋರ್ಟಲ್‍ನ Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ ನಾಗರೀಕ ಸೇವಾಕೇಂದ್ರ/ ಸ್ವತಃ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID( Fruits Identification)ಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಕೃಷಿ ಪಂಡಿತ ಪ್ರಶಸ್ತಿಯ ಪ್ರಥಮ ಬಹುಮಾನದ ಮೊತ್ತ ರೂ. 125000, ದ್ವಿತೀಯ ರೂ. 100000, ತೃತೀಯ ರೂ.75000, ಕೃಷಿ ಪಂಡಿತ ಉದಯೋನ್ಮುಖ ರೂ. 50000 ನೀಡಲಾಗುತ್ತದೆ. ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ ಪಡೆದವರು ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: ಮೂಡಬಿದಿರೆ | ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ: ಸುಸ್ಥಿರ ಪದ್ಧತಿಗಳ ಕುರಿತು ತಜ್ಞರಿಂದ ತರಬೇತಿ

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು  ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...