ಮಂಗಳೂರು | ಪಣಂಬೂರು ಪೊಲೀಸ್ ಠಾಣೆಗೆ ಎಆರ್‌ಕೆ ಶಾಲಾ ವಿದ್ಯಾರ್ಥಿಗಳ ಭೇಟಿ: ಪೊಲೀಸ್ ವ್ಯವಸ್ಥೆ ಬಗ್ಗೆ ಪ್ರಾಯೋಗಿಕ ಪಾಠ

Date:

ಮಂಗಳೂರು ನಗರದ ಬೆಂಗ್ರೆಯಲ್ಲಿರುವ ಎಆರ್‌ಕೆ ಶಾಲೆಯ ವಿದ್ಯಾರ್ಥಿಗಳು ಕಾನೂನು ಜಾಗೃತಿ ಮತ್ತು ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ನೇರ ಅನುಭವ ಪಡೆಯುವ ಉದ್ದೇಶದಿಂದ ಪಣಂಬೂರು ಪೊಲೀಸ್ ಠಾಣೆಗೆ ಶೈಕ್ಷಣಿಕ ಭೇಟಿ ನೀಡಿದರು.

- Advertisement -

ಈ ಸಂದರ್ಭದಲ್ಲಿ, ಕಾನೂನು ವ್ಯವಸ್ಥೆ, ಪೊಲೀಸ್ ಇಲಾಖೆ ನಡೆಸುವ ಕಾರ್ಯಗಳು, ನಾಗರಿಕರ ಹಕ್ಕುಗಳು ಹಾಗೂ ಕಾನೂನು ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳೊಂದಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಭೇಟಿಯ ವೇಳೆ ವಿದ್ಯಾರ್ಥಿಗಳಿಗೆ ಪ್ರಮುಖ ಕಾನೂನು ಸಂಬಂಧಿತ ವಿಷಯಗಳ ಕುರಿತು ವಿಶೇಷ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆಗಳನ್ನು ನೀಡಲಾಯಿತು.

panambur

ಎಫ್‌ಐಆರ್ ದಾಖಲಿಸುವ ವಿಧಾನ, ದೂರು ದಾಖಲಿಸುವ ಪ್ರಕ್ರಿಯೆ, ಅದರ ಪ್ರಾಮುಖ್ಯತೆ ಹಾಗೂ ಕಾನೂನು ತಂತ್ರಜ್ಞಾನ, ಪೋಕ್ಸೋ ಕಾಯ್ದೆ, ಮಕ್ಕಳ ಭದ್ರತೆ ಮತ್ತು ಹಕ್ಕುಗಳ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು, ಡ್ರಗ್ಸ್ ಜಾಲ ಮತ್ತು ಅಪಾಯಗಳು. ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಕಾನೂನು ಬಾಹಿರ ಕ್ರಿಯಾಕಲಾಪಗಳು, ಸೈಬರ್ ಅಪರಾಧಗಳು, ಡಿಜಿಟಲ್ ಜಗತ್ತಿನ ಅಪಾಯಗಳು, ಸಾಮಾಜಿಕ ಮಾಧ್ಯಮದ ಸೂಕ್ತ ಬಳಕೆ ಹಾಗೂ ಹ್ಯಾಕಿಂಗ್, ಆನ್‌ಲೈನ್ ಮೋಸಗಳ ವಿರುದ್ಧ ಜಾಗೃತಿ, ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಮಹಿಳಾ ಸ್ವಾತಂತ್ರ್ಯ ಮತ್ತು ರಕ್ಷಣೆಗಾಗಿ ಕಾನೂನಿನ ಸಹಾಯ, ತುರ್ತು ಸಂಪರ್ಕ ಸಂಖ್ಯೆಗಳ ಬಳಕೆ, ಪೊಲೀಸರ ಕಾರ್ಯವೈಖರಿ, ಕಾನೂನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ, ಅವರ ತುರ್ತು ಪ್ರತಿಕ್ರಿಯೆಗಳ ಪ್ರಕ್ರಿಯೆ ಮತ್ತು ಕರ್ತವ್ಯವನ್ನು ಅನುಭವದ ಮೂಲಕ, ಕಾನೂನು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ವಿದ್ಯಾರ್ಥಿಗಳಿಗೆ ನೇರ ಅರಿವು ಮೂಡಿಸಲಾಯಿತು.

ಇನ್ಸ್‌ಪೆಕ್ಟರ್ ಸಲೀಮ್ ಅಬ್ಬಾಸ್ ವಳಾಲ್ ಅವರೊಂದಿಗೆ ಸಂವಾದ

ಪಣಂಬೂರು ಠಾಣೆಯ ಇನ್ಸ್‌ಪೆಕ್ಟರ್ ಸಲೀಮ್ ಅಬ್ಬಾಸ್ ವಳಾಲ್ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಕಾನೂನಿನ ಪ್ರಾಮುಖ್ಯತೆಯನ್ನು ವಿವರಿಸಿದರು.

“ಪೋಲಿಸರು ನಿಮ್ಮ ಮಿತ್ರರು. ಅವರು ನಿಮ್ಮ ರಕ್ಷಣೆಗಾಗಿ ಇರುವವರು. ನಮ್ಮ ನಿತ್ಯ ಜೀವನದಲ್ಲಿ ಕಾನೂನಿನ ಅರಿವು ಮತ್ತು ಜಾಗೃತಿ ಅತ್ಯಗತ್ಯ. ವಿದ್ಯಾರ್ಥಿ- ಯುವಕರು ಕಾನೂನು ಬಗ್ಗೆ ಮಾಹಿತಿ ಹೊಂದಿದರೆ, ಅವರು ಸಮಾಜದ ಪ್ರಗತಿಯೊಂದಿಗೆ ಸುಸಂಘಟಿತ ಜೀವನವನ್ನು ನಡೆಸಬಹುದು. ಡ್ರಗ್ಸ್, ಸೈಬರ್ ಅಪರಾಧಗಳು ಮತ್ತು ಮಹಿಳಾ ಸುರಕ್ಷತೆ ಈ ದಿನಗಳಲ್ಲಿ ಮುಖ್ಯ ವಿಷಯಗಳಾಗಿದ್ದು, ಇವುಗಳ ಬಗ್ಗೆ ಜಾಗೃತಿಯಿಲ್ಲದಿದ್ದರೆ ಅಪಾಯಗಳು ಎದುರಾಗಬಹುದು. ಕಾನೂನು ನಮ್ಮ ರಕ್ಷಣೆಗೆ, ಆದರೆ ಅದನ್ನು ಸರಿಯಾಗಿ ಅರ್ಥೈಸಿ ಅನುಸರಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ” ಎಂದು ಹೇಳಿದರು.

panambur2

ಈ ಮಾತುಗಳು ವಿದ್ಯಾರ್ಥಿಗಳಿಗೆ ಕಾನೂನು ಜಾಗೃತಿಯ ಮಹತ್ವವನ್ನು ಬೇರೂರಿಸಿದವು. ಈ ಭೇಟಿಯು ವಿದ್ಯಾರ್ಥಿಗಳಲ್ಲಿ ಕಾನೂನು ಪ್ರಜ್ಞೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ತರ ಪಾತ್ರ ವಹಿಸಿತು.

ಪೊಲೀಸ್ ಇಲಾಖೆಯ ಕಾರ್ಯವೈಖರಿ ಮತ್ತು ಕಾನೂನು ಜಾರಿಗೆ ಸಂಬಂಧಿಸಿದ ಪ್ರಮುಖ ಅಂಶಗಳನ್ನು ನೇರವಾಗಿ ನೋಡಿದ ವಿದ್ಯಾರ್ಥಿಗಳು, ಕಾನೂನು ವ್ಯವಸ್ಥೆಯ ಬಗ್ಗೆ ಒಳ್ಳೆಯ ಅರಿವು ಹೊಂದಿದರು. ಮಾತ್ರವಲ್ಲದೆ ತಮ್ಮ ಮನದಲ್ಲಿದ್ದ ಪ್ರಶ್ನೆಗಳನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಂಡರು.

“ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಅಧಿಕಾರಿಗಳು ಮಾತ್ರವಲ್ಲ, ನಮ್ಮ ಸಮಾಜವನ್ನು ಸುರಕ್ಷಿತವಾಗಿಟ್ಟುಕೊಳ್ಳುವ ಪ್ರಮುಖ ಕೆಲಸ ಮಾಡುತ್ತಾರೆ” ಎಂಬ ವಿಷಯವನ್ನು ಶಾಲೆಯ ಕರೆಸ್ಪೋಂಡೆಂಟ್ ಶೌಕತ್ ಅಲಿ ವಿದ್ಯಾರ್ಥಿಗಳಿಗೆ ಹೇಳಿದರು.

ಕಾನೂನು ಜಾಗೃತಿಯ ಮಹತ್ವವನ್ನು ಅನಾವರಣಗೊಳಿಸುವ ಈ ಕಾರ್ಯಕ್ರಮದಿಂದ, ವಿದ್ಯಾರ್ಥಿಗಳಲ್ಲಿ ಸಮಾಜದ ಕಾನೂನು ಬಾಹಿರ ಕ್ರಿಯೆಗಳ ಬಗ್ಗೆ ಹೊಸ ಅರಿವು ಮೂಡಿಸಲಾಯಿತು.

panambur3

ಈ ಶೈಕ್ಷಣಿಕ ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಕಾನೂನು ಪ್ರಜ್ಞೆ, ನಾಗರಿಕ ಜವಾಬ್ದಾರಿ ಹಾಗೂ ಸಾಮಾಜಿಕ ಜಾಗೃತಿಯ ಬಗ್ಗೆಯೂ ಪ್ರಭಾವಿತಗೊಂಡರು. ಈ ಸಂದರ್ಭದಲ್ಲಿ ಪಣಂಬೂರು ಠಾಣೆಯ ವತಿಯಿಂದ ಮಕ್ಕಳಿಗೆ ಲಘು ಪಾನೀಯ ವ್ಯವಸ್ಥೆ ಮಾಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಕೀನ ಪೊಲೀಸರಿಗೆ ಧನ್ಯವಾದಗಳನ್ನು ಅರ್ಪಿಸಿದರು. 7,8,9ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...