ಮಂಗಳೂರು | ಕಲಾವಿದ ಬಿ ಕೆ ಗಣೇಶ್‌ ವಿರಚಿತ ʼಕಡಲಾಚೆಯ ರಮ್ಯ ನೋಟ ದುಬಾಯಿʼ ಪುಸ್ತಕ ಬಿಡುಗಡೆ

Date:

Advertisements

ಚಿತ್ರಶಿಲ್ಪ ಕಲಾವಿದ, ಕ್ರಿಯಾತ್ಮಕ ಕಲಾನಿರ್ದೇಶಕ, ಲೇಖಕ ಬಿ ಕೆ ಗಣೇಶ್ ರೈ ರಚಿಸಿರುವ ʼಕಡಲಾಚೆಯ ರಮ್ಯ ನೋಟ ದುಬಾಯಿʼ ಪುಸ್ತಕವನ್ನು ಯುಎಇ ಬಂಟ್ಸ್‌ ಅಧ್ಯಕ್ಷ ವಕ್ವಾಡಿ ಪ್ರವೀಣ್‌ ಶೆಟ್ಟಿ ಲೋಕಾರ್ಪಣೆ ಮಾಡಿದರು.

ಮಂಗಳೂರಿನ ಪತ್ರಿಕಾ ಭವನದಲ್ಲಿ ನಿನ್ನೆ (ಮಾ.4) ಮಂಗಳೂರು ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆದ 42ನೇ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರವೀಣ್‌ ಶೆಟ್ಟಿ, “ದುಬಾಯಿಯಲ್ಲಿ ಕನ್ನಡ ಪುಸ್ತಕವನ್ನು ತನ್ನದೇ ಆದ ಶೈಲಿಯಲ್ಲಿ ರಚಿಸಿ ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಾಗೂ ಅತ್ಯಂತ ಸುಂದರವಾದ ವರ್ಣ ಚಿತ್ರದೊಂದಿಗೆ ಓದುಗರಿಗೆ ಮುಟ್ಟಿಸುವಲ್ಲಿ ಕೃತಿ ಯಶಸ್ವಿಯಾಗಲಿದೆ” ಎಂದು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

Advertisements

ಲೇಖಕ ಬಿ ಕೆ ಗಣೇಶ್ ರೈ ಮಾತನಾಡಿ, “ತಮ್ಮ ಲೇಖನಗಳನ್ನು ಬರೆದು ಪ್ರಕಟಿಸಲು ಅವಕಾಶ ಕಲ್ಪಿಸಿರುವ ಎಲ್ಲಾ ಮಾಧ್ಯಮಗಳಿಗೆ ಕೃತಜ್ಜತೆಗಳನ್ನು ಸಲ್ಲಿಸಿ, ತಮ್ಮ ಪ್ರತಿಭೆಗೆ ಸದಾ ಪ್ರೋತ್ಸಾಹ, ಬೆಂಬಲ ನೀಡಿರುವ ಸ್ನೇಹಿತರು, ಸಂಘ ಸಂಸ್ಥೆಗಳಿಗೆ ಧನ್ಯವಾದ ಸಲ್ಲಿಸಿದರು. ಗಣ್ಯರ ಸಮ್ಮುಖದಲ್ಲಿ ತಮ್ಮ ಪುಸ್ತಕ ಲೋಕಾರ್ಪಣೆಯಾಗಿರುವುದಕ್ಕೆ ಕನಸು ನನಸಾಗಿದೆ” ಎಂದು ಸರ್ವರಿಗೂ ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp Image 2025 03 05 at 10.49.53 AM

ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಗೆ ಮುನ್ನುಡಿ ಬರೆದಿರುವ ಡಾ. ಅರುಣಾ ನಾಗರಾಜ್ ಮಾತನಾಡಿ, “ಕೃತಿಯಲ್ಲಿರುವ ಒಂದೊಂದು ಲೇಖನಗಳು ಸಂಪೂರ್ಣ ಮಾಹಿತಿಯೊಂದಿಗೆ ಓದುಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕೈಯಲ್ಲಿ ಈ ಒಂದು ಕೃತಿ ಇದ್ದರೆ ಸಮಗ್ರ ದುಬಾಯಿಯನ್ನು ಸಂಪೂರ್ಣವಾಗಿ ಪ್ರವಾಸ ಮಾಡಿಕೊಂಡು ಬಂದಿರುವ ಅನುಭವಾಗುತ್ತದೆ” ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಶ್ರೀ ಶ್ರೀನಿವಾಸ್ ನಾಯಕ್ ಇಂದಾಜೆ ವಿದೇಶದ ನೆಲದಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಗಣೇಶ್ ರೈಯವರ ಸಾಧನೆಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: ಮಂಗಳೂರು | ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಕ್ಕೆ ಆಗ್ರಹ

ಸರ್ವೋತ್ತಮ ಶೆಟ್ಟಿ ಮಾತನಾಡಿ, “ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಗಣೇಶ್ ರೈಯವರು ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಯು.ಎ.ಇ. ಯಲ್ಲಿರುವ ಕರ್ನಾಟಕ ಪರ ಸಂಘಟನೆಗಳಲ್ಲಿ ಕರ್ನಾಟಕದ ಕಲೆ ಭಾಷೆ ಸಂಸ್ಕೃತಿಯನ್ನು ಕಳೆದ ಎರಡುವರೆ ದಶಕಗಳಿಂದ ನಿರಂತರವಾಗಿ ಮಾಡಿಕೋಡು ಬರುತ್ತಿದ್ದಾರೆ. ಬಹುಮುಖ ಪ್ರತಿಭೆಯ ವ್ಯಕ್ತಿತ್ವವನ್ನು ಹೊಂದಿರುವ ಗಣೇಶ್ ರೈಯವರು ಶಿಲ್ಪಿಯಾಗಿ, ಚಿತ್ರಕಾರರಾಗಿ, ಕಾರ್ಯಕ್ರಮ ನಿರೂಪಕರಾಗಿ ಸಮಾಜ ಸೇವಕರಾಗಿ, ಲೇಖಕ ಬರಹಗಾರರಗಿ ನೂರಾರು ಗಣ್ಯರ ಸಂದರ್ಶನದ ಲೇಖನಗಳನ್ನು ಪ್ರಕಟಿಸುತ್ತಾ ಇದೀಗ ದುಬಾಯಿಯ ಸಂಪೂರ್ಣ ಚಿತ್ರಣವಿರುವ ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಯನ್ನು ಪ್ರಕಟಿಸಿರುವುದು ದುಬಾಯಿಯಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗೆ ಸಂದಿರುವ ಗೌರವ ಎಂದು ಶ್ಲಾಘಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X