ಮಂಗಳೂರು | ಬ್ಯಾರಿ ಭಾಷೆ, ಸಾಹಿತ್ಯ ತಳಸ್ಪರ್ಶಿ ಅಧ್ಯಯನ ಅಗತ್ಯ: ಡಾ. ಅಬೂಬಕರ್ ಸಿದ್ದೀಕ್

Date:

ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಸಂಬಂಧಿಸಿದಂತೆ ನಡೆಯುವ ಅಧ್ಯಯನವು ತಳಸ್ಪರ್ಶಿಯಾಗಬೇಕು. ಆವಾಗ ಮಾತ್ರ ಬ್ಯಾರಿ ಭಾಷೆ ಜನ ಮಾನಸದಲ್ಲಿ ಆಳವಾಗಿ ಬೇರೂರಲು  ಸಾಧ್ಯ ಎಂದು ಮಂಗಳೂರು ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಹೇಳಿದರು.

- Advertisement -

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ನಗರದ ಮಂಗಳೂರು ವಿ.ವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ (ಮಾ.1) ನಡೆದ ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ʼಬ್ಯಾರಿ: ನಾನು ಕಂಡಂತೆʼ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬ್ಯಾರಿ ಭಾಷೆಯಲ್ಲಿ ಸಾಹಿತ್ಯದ ಅನೇಕ ಪ್ರಕಾರಗಳು ಬಂದಿವೆ. ಆದರೆ, ತಳಸ್ಪರ್ಶಿ ಅಧ್ಯಯನದ ಕೊರತೆ ಕಾಡುತ್ತಿವೆ. ಈ ನಿಟ್ಟಿನಲ್ಲಿ ಅಧ್ಯಯನ ಪೀಠವು ಕ್ಷೇತ್ರ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಅಬೂಬಕ್ಕರ್ ಸಿದ್ದೀಕ್ ಅವರು ಹೇಳಿದರು.

ಆಲಿಯಬ್ಬ ಜೋಕಟ್ಟೆಯವರ ಈ ಅನುಭವ ಕಥನವು ಸಂಶೋಧನಾಸಕ್ತ ವಿದ್ಯಾರ್ಥಿಗಳಿಗೆ ಆಕರ ಕೃತಿಯಾಗಲಿ ಎಂದು ಡಾ. ಅಬೂಬಕ್ಕರ್ ಸಿದ್ದೀಕ್ ಆಶಿಸಿದರು.

ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಇಸ್ಮಾಯಿಲ್ ಎನ್. ಉದ್ಘಾಟಿಸಿದರು. ಕೃತಿಕಾರ ಆಲಿಯಬ್ಬ ಜೋಕಟ್ಟೆ ಕೃತಿ ರಚನೆಗೆ ಸಂಬಂಧಿಸಿದಂತೆ ತನ್ನ ಅನುಭವ ಹಂಚಿಕೊಂಡರು. ಪತ್ರಕರ್ತ ಹಂಝ ಮಲಾರ್ ಕೃತಿ ಪರಿಚಯ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮುಹಮ್ಮದ್ ಸ್ವಾದಿಕ್, ಆಯಿಶಾ ಝಹೀಮಾ, ಮುಹಮ್ಮದ್ ಸಿಮಕ್, ನೌಶೀನಾ ಅವರು ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ವಿಚಾರ ಮಂಡಿಸಿದರು.

ಅತಿಥಿಗಳಾಗಿ ಭಾಗವಹಿಸಿದ್ದ ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ, ಬ್ಯಾರಿ ವಾರ್ತೆಯ ಸಂಪಾದಕ ಬಶೀರ್ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್‌ನ ಅಧ್ಯಕ್ಷ ಖಾಲಿದ್ ಉಜಿರೆ, ʼಮೇಲ್ತೆನೆʼಯ ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್, ಬ್ಯಾರಿ ಅಕಾಡಮಿಯ ರಿಜಿಸ್ಟ್ರಾರ್ ಆರ್. ಮನೋಹರ ಕಾಮತ್ ಮಾತನಾಡಿದರು.

ಅಧ್ಯಯನ ಪೀಠದ ಸದಸ್ಯರಾದ ಸಮೀರಾ ಕೆ.ಎ. ಸ್ವಾಗತಿಸಿದರು. ಖಾಲಿದ್ ತಣ್ಣೀರುಬಾವಿ ವಂದಿಸಿದರು. ಶಹಲಾ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...