ಮಂಗಳೂರು | ಪಠ್ಯೇತರ ಪುಸ್ತಕಗಳ ಓದಿನಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಸಾಧ್ಯ: ಉಮರ್ ಯು.ಹೆಚ್

Date:

ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆ ಜೋತು ಬೀಳದೆ, ಪಠ್ಯೇತರ ಪುಸ್ತಕಗಳನ್ನೂ ಜ್ಞಾನ ಸಂಪಾದನೆ ಮಾಡುವ ಮೂಲಕ ಕೀಳರಿಮೆಗಳನ್ನು ಹೋಗಲಾಡಿಸಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ತಿಳಿಸಿದರು.

- Advertisement -

ಅವರು ಬುಧವಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನಗರದ ಬದ್ರಿಯಾ ಶೈಕ್ಷಣಿಕ ಸಂಸ್ಥೆಗಳ ಸಹಯೋಗದೊಂದಿಗೆ ಬದ್ರಿಯಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ‘ಬ್ಯಾರಿ ಸಾಹಿತ್ಯ ಕಮ್ಮಟ’ ಉದ್ಘಾಟಿಸಿ‌ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ಹೊಂದಿದರೆ ಮಾತ್ರ ಸಾಧಕರಾಗಲು ಸಾಧ್ಯ. ಕನಸುಗಾರರಾಗಿ ಬೆಳೆಯಬೇಕಾದ ಯುವಜನಾಂಗ ಮಾತೃ ಭಾಷೆಯ ಸೇವೆಗೂ ಮುಂದಾಗಬೇಕು ಎಂದು ಉಮರ್ ಯು ಹೆಚ್ ಹೇಳಿದರು.

ಬದ್ರಿಯಾ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಸೀಮಾ ಎ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ, ಶುಭಹಾರೈಸಿದರು. ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಉಳ್ಳಾಲ ಘಟಕದ ಅಧ್ಯಕ್ಷೆ ಸಿಹಾನ ಬಿ.ಎಂ. ಸಂಪನ್ಮೂಲ ವ್ಯಕಿಯಾಗಿ ಭಾಗವಹಿಸಿ ಬ್ಯಾರಿ ಸಾಹಿತ್ಯ ಕಮ್ಮಟ ನಡೆಸಿಕೊಟ್ಟರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯೆ, ಕಾರ್ಯಕ್ರಮದ ಸಂಚಾಲಕಿ ಶಮೀರಾ ಜಹಾನ್ ಸ್ವಾಗತಿಸಿದರು. ಅಕಾಡೆಮಿ ಸದಸ್ಯ ಯು.ಹೆಚ್. ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಅಬ್ದುಲ್ ರಹೀಮ್ ಧನ್ಯವಾದವಿತ್ತರು.

ಅಕಾಡೆಮಿ ಸದಸ್ಯರಾದ ಹಾಜಿ ಯು.ಕೆ. ಹಮೀದ್, ಹಮೀದ್ ಹಸನ್ ಮಾಡೂರು, ಬಿ.ಎಸ್. ಮುಹಮ್ಮದ್, ಮಾಜಿ ಸದಸ್ಯ ಹುಸೈನ್ ಕಾಟಿಪಳ್ಳ, ಬದ್ರಿಯಾ ಪಪೂ ಕಾಲೇಜಿನ ಮಾಜಿ ಪ್ರಾಂಶುಪಾಲ ಯೂಸುಫ್ ಡಿ., ಪ್ರಾಧ್ಯಾಪಕರಾದ ಸಫ್ವಾನ್ ಕೆ., ಪುಟ್ಟಸ್ವಾಮಿ ಹಾಗೂ ಯಾಕೂಬ್ ಕಲ್ಲರ್ಪೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ನ.30ರವರೆಗೆ ಅವಕಾಶ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ,...

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...