ಮಂಗಳೂರು | ಬ್ಯಾರಿ ಜಾನಪದ ಕಥೆಗಳ ಇಂಗ್ಲಿಷ್ ಅನುವಾದಿತ ಕೃತಿ ಬಿಡುಗಡೆ

Date:

Advertisements

ನಾಡಿನ ಬೇರೆ ಬೇರೆ ಲೇಖಕ-ಲೇಖಕಿಯರು ಬ್ಯಾರಿ ಭಾಷೆಯಲ್ಲಿ ಬರೆದ ಜಾನಪದ ಕತೆಗಳ ಸಂಕಲನ “ಚನ್ನನ”ದ ಇಂಗ್ಲಿಷ್ ಅನುವಾದಿತ ’The Fakir’s Daughter and other Beary Folktales”ಕೃತಿಯನ್ನು ನಗರದ ಸಂತ ಅಲೋಶಿಯಸ್ ಡೀಮ್ಡ್ ವಿವಿಯ ಅಡ್ಮಿನ್ ಬ್ಲಾಕ್‌ನ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ಸಂತ ಅಲೋಶಿಯಸ್ ಡೀಮ್ಡ್ ವಿವಿಯ ಉಪಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಕೃತಿಯನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಭಾಷೆ ಮತ್ತು ಸಾಂಸ್ಕ್ರತಿಕ ಅಧ್ಯಯನ ನಿಕಾಯವು ಪ್ರಾದೇಶಿಕ ಭಾಷೆಗಳ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಸಂಸ್ಕೃತಿ ನೆಲೆನಿಲ್ಲಲು ಇಂತಹ ವೌಲಿಕ ಕೃತಿಗಳ ಪ್ರಕಟನೆಯ ಅಗತ್ಯವೂ ಇದೆ. ಇವುಗಳನ್ನು ಓದುವ ಮೂಲಕ ಸಂಸ್ಕೃತಿ – ಬದುಕಿನ ಬಗ್ಗೆ ಅರಿಯಲು ಸಾಧ್ಯವಿದೆ ಎಂದರು.

Advertisements

ಕೃತಿಯ ಸಂಪಾದಕ, ಪತ್ರಕರ್ತ ಹಂಝ ಮಲಾರ್ ಮಾತನಾಡಿ, ಬ್ಯಾರಿ ಕ್ಷೇತ್ರಕ್ಕೆ ಸಂಬಂಧಿಸಿ ಈವರೆಗೆ ಬ್ಯಾರಿ, ಕನ್ನಡ, ಇಂಗ್ಲಿಷ್‌ನಲ್ಲಿ 125 ಕೃತಿಗಳು ಪ್ರಕಟಗೊಂಡಿವೆ. ಆದರೆ ಬ್ಯಾರಿ ಭಾಷೆಯಲ್ಲಿ ಪ್ರಕಟಗೊಂಡ ಕೃತಿ ಇದೇ ಮೊದಲ ಬಾರಿಗೆ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಅದಕ್ಕಾಗಿ ಅನುವಾದಕಿ ಡಾ.ಸಿಲ್ವಿಯಾ ರೇಗೋ ಅಭಿನಂದನಾರ್ಹರು ಎಂದರು.

ವೇದಿಕೆಯಲ್ಲಿ ಹಿರಿಯ ಸಂಶೋಧಕ ರೆ.ಡಾ.ವಿಲ್ಲಿ ಡಿಸಿಲ್ವ, ಕೃತಿಯ ಅನುವಾದಕಿ, ಸಂತ ಅಲೋಶಿಯಸ್ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕಿ ಡಾ.ಸಿಲ್ವಿಯಾ ರೇಗೋ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳನ್ನು ಡಾ.ಝೀಟ ಲೋಬೊ ಪರಿಚಯಿಸಿದರು. ಕೊಂಕಣಿ ವಿಭಾಗದ ಮುಖ್ಯಸ್ಥೆ ಪ್ರೊ.ಫ್ಲೋರಾ ಕ್ಯಾಸ್ಟಲಿನೊ ಸ್ವಾಗತಿಸಿದರು.ಕಾರ್ಯಕ್ರಮದ ಸಂಯೋಜಕ ಜೊಕ್ಕಿಂ ಪಿಂಟೊ ವಂದಿಸಿದರು.

ರೇಡಿಯೋ ಸಾರಂಗ್‌ನ ಕಾರ್ಯಕ್ರಮ ನಿರ್ವಾಹಕ ಸೈಫ್ ಕುತ್ತಾರ್ ಸಹಕರಿಸಿದರು. ಪ್ರಾಧ್ಯಾಪಕ ಸ್ಯಾಮುವೆಲ್ ಪೀಟರ್ಸ್ ಕಾರ್ಯಕ್ರಮ ನಿರೂಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X