ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಚಲಿಸುತ್ತಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ, ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.
ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಬರುತ್ತಿದ್ದಂತೆಯೇ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆ ಬಳಿಕ ಚಾಲಕ ಗಾಡಿ ನಿಲ್ಲಿಸಿದ್ದಾನೆ.
ಕಾರಿಗೆ ಬೆಂಕಿ ಹತ್ತಿಕೊಂಡಿದ್ದ ಬೆಂಕಿಯನ್ನು ಸ್ಥಳೀಯರು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ, ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ.
ಇದನ್ನು ಓದಿದ್ದೀರಾ? ರಾಯಚೂರು | ಮನೆ ಬಾಡಿಗೆ ಕೇಳಿದ್ದಕ್ಕೆ ಮಾಲಕಿಯ ಹತ್ಯೆಗೈದ ಬಾಡಿಗೆದಾರ!
ದೆಹಲಿ ನೋಂದಣಿಯ ಹಳೆಯ, 2011-12 ಮಾದರಿಯ ಬಿಎಂಡಬ್ಲ್ಯೂ ಕಾರು ಇದು ಎಂದು ಮಂಗಳೂರು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಗಳನ್ನು ಕಲೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.
ಕಾರಿಗೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.
