ಮಂಗಳೂರು | ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಚಲಿಸುತ್ತಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ, ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.

- Advertisement -

ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಬರುತ್ತಿದ್ದಂತೆಯೇ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆ ಬಳಿಕ ಚಾಲಕ ಗಾಡಿ ನಿಲ್ಲಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾರಿಗೆ ಬೆಂಕಿ ಹತ್ತಿಕೊಂಡಿದ್ದ ಬೆಂಕಿಯನ್ನು ಸ್ಥಳೀಯರು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ, ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ.

ಇದನ್ನು ಓದಿದ್ದೀರಾ? ರಾಯಚೂರು | ಮನೆ ಬಾಡಿಗೆ ಕೇಳಿದ್ದಕ್ಕೆ ಮಾಲಕಿಯ ಹತ್ಯೆಗೈದ ಬಾಡಿಗೆದಾರ!

ದೆಹಲಿ ನೋಂದಣಿಯ ಹಳೆಯ, 2011-12 ಮಾದರಿಯ ಬಿಎಂಡಬ್ಲ್ಯೂ ಕಾರು ಇದು ಎಂದು ಮಂಗಳೂರು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಗಳನ್ನು ಕಲೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ಕಾರಿಗೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...