ಮಂಗಳೂರು | BSWT ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Date:

ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್, ಮಂಗಳೂರು ಹಾಗೂ ಬಾಳೆಪುಣಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಟ್ರಸ್ಟ್‌ನ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾದ ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವು ಬಾಳೆಪುಣಿಯ ರಾಜೀವ್ ಗಾಂಧಿ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.

- Advertisement -

ಅಶೀರುದ್ದೀನ್ ಸಾರ್ತಬೈಲ್ ಅವರು ಸ್ವಾಗತ ಭಾಷಣ ಮಾಡಿದರು. ಪ್ರಾಸ್ತಾವಿಕ ನುಡಿಯನ್ನಾಡಿದ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಅಧ್ಯಕ್ಷ ಎನ್. ಅಮೀನ್ ಪಕ್ಕಲಡ್ಕ, ಮಹಿಳೆಯರ ಆರ್ಥಿಕ ಸ್ವಾವಲಂಬನೆ ಸಮಾಜದ ಸಮಗ್ರ ಅಭಿವೃದ್ಧಿಗೆ ಅಗತ್ಯವಾಗಿದ್ದು, ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವುದು ಕಾಲಘಟ್ಟದ ಅವಶ್ಯಕತೆ. ಮಹಿಳೆಯರಿಗೆ ಕೌಶಲ್ಯ ಹಾಗೂ ಅವಕಾಶ ಎರಡೂ ದೊರಕಿದರೆ ಅವರು ಕುಟುಂಬದ ಆರ್ಥಿಕ ಸ್ಥಿತಿಯನ್ನು ಬದಲಾಯಿಸುವ ಶಕ್ತಿ ಹೊಂದಿದ್ದಾರೆ. ಮಹಿಳಾ ಸಬಲೀಕರಣದ ದಿಸೆಯಲ್ಲಿ ಇಂತಹ ತರಬೇತಿ ಶಿಬಿರಗಳನ್ನು, ಸಮಾಜಮುಖಿ ಕಾರ್ಯಕ್ರಮಗಳನ್ನು ಟ್ರಸ್ಟ್ ಮುಂದುವರಿಸಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಅಧೀಕ್ಷಕ ಹರೀಶ್ ಕುಮಾರ್ ಕುತ್ತಡ್ಕ ಅವರು ಟ್ರಸ್ಟ್‌ನ ಹತ್ತನೇ ವರ್ಷದ ಬ್ರೋಕರ್ ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.

1087522

ಬಳಿಕ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿಗೂ ಸಮಾನ ಮಹತ್ವವಿದ್ದು, ಟೈಲರಿಂಗ್ ತರಬೇತಿ ಪಡೆದ ಮಹಿಳೆಯರು ಸ್ವ ಉದ್ಯೋಗ ಆರಂಭಿಸುವ ಮೂಲಕ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬಲಪಡಿಸಬಹುದು. ಇಂತಹ ತರಬೇತಿ ಶಿಬಿರಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು.

ಶಿಬಿರದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಲಾಗಿದ್ದು, ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅತಿಥಿಗಳಿಂದ ಬಹುಮಾನ ವಿತರಿಸಲಾಯಿತು.

ಬಾಳೆಪುಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಮಾತನಾಡುತ್ತಾ, ಗ್ರಾಮೀಣ ಮಹಿಳೆಯರು ಇಂತಹ ತರಬೇತಿಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿ ಮಹಿಳಾ ಸಬಲೀಕರಣದ ದಿಸೆಯಲ್ಲಿ ಪಂಚಾಯತ್ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ಉಪಾಧ್ಯಕ್ಷ ಸಿಎಂ ಶರೀಫ್ ಪಟ್ಟೋರಿ ಅವರು, ಮಹಿಳೆಯರ ಸ್ವಾವಲಂಬನೆ ಕುಟುಂಬ ಹಾಗೂ ಸಮಾಜದ ಪ್ರಗತಿಗೆ ಪ್ರಮುಖವಾಗಿದೆ. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಅವಕಾಶ ಮಾಡಿ ಕೊಡುತ್ತದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲೆಯ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಮಾತನಾಡಿ, ಕೌಶಲ್ಯದ ಜೊತೆಗೆ ಸ್ವಚ್ಛತೆ ಮತ್ತು ಶಿಸ್ತು ಜೀವನದ ಯಶಸ್ಸಿಗೆ ಅಗತ್ಯವೆಂದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಆಯಿಷಾ ಬಾನು ಬಿ.ಎ ಅವರು, ಮಹಿಳೆಯರಿಗೆ ಅವಕಾಶ ನೀಡಿದರೆ ಅವರು ಸಮಾಜವನ್ನು ಮುನ್ನಡೆಸುವ ಶಕ್ತಿ ಹೊಂದಿದ್ದಾರೆ ಎಂದು ತನ್ನ ಅನುಭವದ ಮಾತಗಳನ್ನಾಡಿದರು.

ಸಮಾರೋಪ ನುಡಿಯನ್ನು ಶಿಕ್ಷಕಿ ಶ್ರೀಮತಿ ಮಾಲಾಕ್ಷಿ ಅವರು ನೀಡಿ, ಶಿಬಿರ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಭಂಡಾರಿ, BSWT ಮಂಗಳೂರು ಉಪಾಧ್ಯಕ್ಷ ಅಬ್ದುಲ್ಲಾ ಹಾಗೂ ಸತ್ತಾರ್ ಕೈರಂಗಳ ಉಪಸ್ಥಿತರಿದ್ದರು.

ಹೊಲಿಗೆ ತರಬೇತಿ ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ತಾವು ಮೂರು ತಿಂಗಳ ಅವಧಿಯಲ್ಲಿ ಮಾಡಿದ ವಸ್ತುಗಳ ಪ್ರದರ್ಶನವೂ ಈ ಸಂದರ್ಭದಲ್ಲಿ ನಡೆಯಿತು.

ವಕೀಲರಾದ ಕೆ ಮುಹಮ್ಮದ್ ಝಮೀರ್ ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ರಮ್ಯಾ ಎಂ ಅವರು ನಡೆಸಿಕೊಟ್ಟರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...