ಮಂಗಳೂರು | ಉದ್ಯಮಿಯ ಮನೆ ದರೋಡೆ ಪ್ರಕರಣ: 10 ಮಂದಿಯ ಬಂಧನ; ಲಾರಿ ಚಾಲಕನೇ ಸೂತ್ರಧಾರ!

Date:

ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಅವರ ಮನೆ ದರೋಡೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, 10 ಮಂದಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

‘ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರುಮಾರ್ಗ ಗ್ರಾಮದ ನಿವಾಸಿ ವಸಂತಕುಮಾರ್  ಎಂಬಾತನೇ ಈ ಪ್ರಕರಣದ ಸೂತ್ರಧಾರ’ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, “ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 10 ಮಂದಿಯನ್ನು ಬಂಧಿಸಿದ್ದೇವೆ. ಸುಮಾರು ಏಳೆಂಟು ತಿಂಗಳಿಂದ ಈ ದರೋಡೆ ನಡೆಸಲು ಸಂಚು ರೂಪಿಸಿದ್ದರು. ಉದ್ಯಮಿಯ ಬೆಡ್‌ರೂಮಿನಲ್ಲಿ ಸುಮಾರು ನೂರು ಕೋಟಿ ಹಣ ಅಡಗಿಸಿಡಲಾಗಿದೆ ಎಂದು ನಂಬಿಕೊಂಡು ಈ ಕೃತ್ಯ ಎಸಗಿದ್ದಾರೆ. ಅದಕ್ಕಾಗಿ ದರೋಡೆ ನಡೆಸುವ ಸಮಯದಲ್ಲಿ ಸುಮಾರು ಗೋಣಿಚೀಲಗಳನ್ನು ಕೂಡ ತಂದಿದ್ದರು” ಎಂದು ತಿಳಿಸಿದ್ದಾರೆ.

ಮಂಗಳೂರು ಕಮಿಷನರ್

ಒಟ್ಟು 10 ಮಂದಿಯ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಏಳು ಮಂದಿ ಕೇರಳ ಮೂಲದವರಾಗಿದ್ದರೆ, ಮೂರು ಮಂದಿ ಕರ್ನಾಟಕದವರು ಎಂದು ಪೊಲೀಸರು ತಿಳಿಸಿದ್ದಾರೆ.

ನೀರುಮಾರ್ಗದ ವಸಂತ ಕುಮಾರ್ (42), ನೀರುಮಾರ್ಗದ ರಮೇಶ್ (42), ಬಂಟ್ವಾಳದ ರೇಮಂಡ್ ಡಿಸೋಜಾ (47), ಕೇರಳದ ಕಾಸರಗೋಡಿನ ಬಾಲಕೃಷ್ಣ ಶೆಟ್ಟಿ (48), ತಿರುವನಂತಪುರದ ಬಿಜು ಜಿ (41), ತ್ರಿಶೂರ್‌ನಿಂದ ಝಾಕೀರ್ ಹುಸೇನ್ (56), ವಿನೋಜ್ ಪಿ ಕೆ (38), ಸಜೀಶ್ ಎಂಎಂ (32), ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದರೋಡೆ ಪ್ರಕರಣ

ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.

ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದ. ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ, ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮಿಷನರ್ ಹೇಳಿದ್ದಾರೆ.

ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.

ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದ್ದರೆ, ಝಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು, ಲೂಟಿ ಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು, 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು ಎಂದು ಕಮಿಷನರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಲಿಂಗಸುಗೂರು | ಭಕ್ತರ ವೇಷದಲ್ಲಿ ಬಂದು ಮಠದಿಂದ ₹40 ಲಕ್ಷ ಮೌಲ್ಯದ ಸೊತ್ತು ದರೋಡೆಗೈದ ಕಳ್ಳರು!

ಒಂದೇ ಒಂದು ಸುಳಿವೇ ಇಲ್ಲದ ಈ ಪ್ರಕರಣದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...