ಮಂಗಳೂರು | ಪಾದುವಾ ಕಾಲೇಜು ಮೈದಾನದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ

Date:

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ, ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಕೈಗೊಂಡಿರುವುದು ಉತ್ತಮವಾಗಿದೆ. ಭಾರತ ಇಂದು ದೇಶದ ಹೊರಗೆ ಮತ್ತು ಒಳಗೆ ಸವಾಲುಗಳನ್ನು ಎದುರಿಸುತ್ತಿದೆ. ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ನಿವೃತ್ತ ಸೇನಾಧಿಕಾರಿ ಕರ್ನಲ್ ಕೆ ಜಯಚಂದ್ರನ್ ಹೇಳಿದರು

- Advertisement -

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ ಯುವ ರೆಡ್‌ಕ್ರಾಸ್ ಉಪಸಮಿತಿ, ಯುವ ರೆಡ್‌ಕ್ರಾಸ್ ಮಂಗಳೂರು ವಿವಿ ಘಟಕ ಮತ್ತು ಪಾದುವ ಪದವಿ ಕಾಲೇಜು ಸಹಯೋಗದಲ್ಲಿ ನಗರದ ಪಾದುವಾ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ದೇಶದ ನಾಗರಿಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ ದೇಶಾದ್ಯಂತ ಪೂರ್ವ ಸಿದ್ಧತಾ ತಾಲೀಮು ನಡೆಸಲಾಗುತ್ತಿದೆ. ಭಾರತೀಯ ಸೇನೆ ಈಗ ಸಶಕ್ತವಾಗಿದ್ದು, ʼಆಪರೇಶನ್ ಸಿಂಧೂರʼ ಎಂಬ ಕಾರ್ಯಾಚರಣೆ ಮೂಲಕ ಪಾಕಿಸ್ತಾನದ ಭಯೋತ್ಪಾದಕರಿಗೆ ಸೂಕ್ತ ಉತ್ತರ ನೀಡಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಘಟಕದ ಚೇರ್ಮನ್ ಸಿ ಎ ಶಾಂತಾರಾಮ ಶೆಟ್ಟಿ ಮಾತನಾಡಿ, “ಪಾಕಿಸ್ತಾನದ ವಿರುದ್ಧ ಯುದ್ಧ ಅನಿವಾರ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಸಂಭಾವ್ಯ ಅನಾಹುತಗಳನ್ನು ತಡೆಯಲು ನಾಗರಿಕರೂ ಕೂಡಾ ಸಜ್ಜಾಗಬೇಕು” ಎಂದರು.

ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗ್ನಿ ನಂದಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ʼಆಪರೇಷನ್‌ ಸಿಂಧೂರ್‌ʼಗೆ ಡಿವೈಎಫ್ಐ ಜಿಲ್ಲಾ ಸಮಿತಿಯಿಂದ ಬೆಂಬಲ

ಪಾದುವಾ ಕಾಲೇಜಿನ ಪ್ರಾಂಶುಪಾಲ ಫಾ.ಅರುಣ್ ವಿಲ್ಸನ್ ಲೋಬೊ, ಅಗ್ನಿಶಾಮಕ ದಳದ ಕದ್ರಿ ಠಾಣೆಯ ಅಧಿಕಾರಿ ವೆಂಕಟೇಶ್,
ಯುವ ರೆಡ್‌ಕ್ರಾಸ್ ಮಂಗಳೂರು ವಿವಿ ಘಟಕದ ನೋಡಲ್ ಆಫೀಸರ್ ಡಾ. ಗಾಯತ್ರಿ ಎನ್ ಸೇರಿದಂತೆ ಮುಖ್ಯ ಅತಿಥಿಗಳಾಗಿದ್ದರು. ರೆಡ್‌ಕ್ರಾಸ್ ಸಂಸ್ಥೆಯ ದ ಕ ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕರಾದ ಪಿ ಬಿ ಹರೀಶ್ ರೈ, ಗುರುದತ್ ಕಾಮತ್, ಸಲಹೆಗಾರ ಸುಧಾಕರ್ ಇದ್ದರು.

ಯುವ ರೆಡ್‌ಕ್ರಾಸ್ ಉಪ ಸಮಿತಿಯ ನಿರ್ದೇಶಕ ಸಚೇತ್ ಸುವರ್ಣ ಸ್ವಾಗತಿಸಿ, ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ವಂದಿಸಿದರು. ಪಾದುವಾ ಕಾಲೇಜಿನ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿ ರೋಶನ್ ಸಾಂತುಮೇಯರ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...