ಕೋಮು ಕೊಲೆ ಪ್ರಕರಣಗಳನ್ನು ಎಸ್‌ಐಟಿ ತನಿಖೆ ನಡೆಸಬೇಕು: ರಮಾನಾಥ್ ರೈ

Date:

ಕರಾವಳಿ ಜಿಲ್ಲೆಗಳಲ್ಲಿ ವರದಿಯಾಗಿರುವ ಕೋಮು ಘಟನೆಗಳಿಗೆ ಸಂಬಂಧಿಸಿದ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂತಹ ಎಲ್ಲ ಕೊಲೆ ಪ್ರಕರಣಗಳನ್ನು ಹಿರಿಯ ಪ್ರಾಮಾಣಿಕ ಪೊಲೀಸ್ ಅಧಿಕಾರಿಯೊಬ್ಬರು ವಿಚಾರಣೆ ನಡೆಸಬೇಕು. ಹತ್ಯೆಗಳ ಹಿಂದಿರುವ ಎಲ್ಲ ಸಂಚುಕೋರರು ಮತ್ತು ಸೂತ್ರಧಾರರನ್ನು ಜೈಲಿಗೆ ಕಳುಹಿಸಬೇಕು” ಎಂದರು.

“ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದೆ. ಈ ಹೊತ್ತಿನಲ್ಲಿ, ಕೋಮುವಾದಿ ಶಕ್ತಿಗಳು ಧರ್ಮದ ಹೆಸರಿನಲ್ಲಿ ಕೊಲೆಗಳ ಮೂಲಕ ಶಾಂತಿ ಕದಡಲು ಪ್ರಯತ್ನಿಸುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ರಾಜಕೀಯದಿಂದಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಹಲವಾರು ಮುಗ್ಧ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್ ಸರ್ಕಾರವು ಕೋಮು ಕೊಲೆಗಳನ್ನು ಪ್ರಮುಖ ವಿಷಯವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು...