ಮಂಗಳೂರು | ಕೆಂಪುಕಲ್ಲು, ಮರಳು ಇಲ್ಲದೇ ನಿರ್ಮಾಣ ಕಾರ್ಯ ಸ್ಥಗಿತ: ಸಿವಿಲ್ ಗುತ್ತಿಗೆದಾರರ ಸಂಘ

Date:

ಜಿಲ್ಲೆಯಲ್ಲಿ ಕಳೆದ ಒಂದೆರಡು ತಿಂಗಳಿನಿಂದ ಕೆಂಪು ಕಲ್ಲು ಹಾಗೂ ಮರಳು ಸಿಗದೆ ಕಟ್ಟಡ ನಿರ್ಮಾಣ ಕಾಮಗಾರಿಗಳು ಪೂರ್ಣವಾಗಿ ಸ್ಥಗಿತವಾಗಿದೆ. ಇದರಿಂದ ನಿರ್ಮಾಣ ಕಾರ್ಮಿಕರ ಜತೆಗೆ ಈ ಉದ್ಯಮವನ್ನು ನಂಬಿದ ಕೂಲಿ ಕಾರ್ಮಿಕರು ಉದ್ಯಮಿಗಳು ಸೇರಿದಂತೆ ಹಲವು ತೀವ್ರವಾಗಿ ಆರ್ಥಿಕ ತೊಂದರೆಗೆ ಸಿಲುಕಿದ್ದಾರೆ. ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ನೀಡಿರುವ ಭರವಸೆಯಂತೆ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ಅನಿವಾರ್ಯ ಎಂದು ದ.ಕ. ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಂಘ ತಿಳಿಸಿದೆ.

- Advertisement -

ಇಂದು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ, ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬೇಕಾದ ಉತ್ತಮ ಗುಣಮಟ್ಟದ ಮರಳು ಹಲವು ವರ್ಷಗಳಿಂದ ಲಭ್ಯವಾಗದೆ ಗುತ್ತಿಗೆದಾರರು ಈಗಾಗಲೇ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದಾರೆ. ಇದೀಗ ಒಂದೆರಡು ತಿಂಗಳಿನಿಂದ ಕಾನೂನಿನ ನೆಪವೊಡ್ಡಿ ಕೆಂಪು ಮುರಕಲ್ಲಿನ ಗಣಿಗಾರಿಕೆ ನಿರ್ಬಂಧಿಸಿರುವ ಕಾರಣ ಮತ್ತಷ್ಟು ಸಮಸ್ಯೆ ಹೆಚ್ಚಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನೂ ಓದಿ: ಕೈದಿಗೆ ಮಾದಕ ವಸ್ತು ಪೂರೈಕೆ: ಮಂಗಳೂರು ಜೈಲು ಮೇಲೆ ಪೊಲೀಸ್-ಎಸ್‌ಎಎಫ್‌ ತಂಡ ದಾಳಿ

ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸುವ ಬಗ್ಗೆ ಹಲವು ವರ್ಷಗಳಿಂದ ಸರ್ಕಾರದ ಪ್ರತಿನಿಧಿಗಳು ಹೇಳುತ್ತಾ ಬಂದಿದ್ದರೂ ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಕೆಂಪು ಕಲ್ಲು ಕೂಡಾ ಇದೀಗ ಅಲಭ್ಯವಾಗಿದೆ. ಇದರಿಂದ ನಿರ್ಮಾಣ ಕ್ಷೇತ್ರದಲ್ಲಿ ತಲ್ಲಣ ಸೃಷ್ಠಿಯಾಗಿದೆ. ಗ್ರಾಮಾಂತರ ಭಾಗಗಳಲ್ಲಿ ಒಂದು ಅಥವಾ ಎರಡು ಮಹಡಿ ಮನೆಗಳನ್ನು ಕಾಂಕ್ರಿಟ್ ಪಿಲ್ಲರ್ ಇಲ್ಲದೆ ಕೆಂಪು ಕಲ್ಲು ಬಳಸಿ ಮಧ್ಯಮ ಹಾಗೂ ಬಡ ವರ್ಗದ ಜನರ ಮನೆ ನಿರ್ಮಾಣ ಮಾಡುತ್ತಿದ್ದರು. ಕೆಂಪು ಕಲ್ಲು ಹಾಗೂ ಮರಳು ಸಿಗದೆ ಅವರ ಕನಸಿಗೆ ಈಗ ತೊಂದರೆಯಾಗಿದೆ.

ಇದನ್ನೂ ಓದಿ: ಮಂಗಳೂರು | ಜು.14-17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುತ್ತಿಗೆದಾರರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ರಾಜ್ಯದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ದುಡಿಮೆಯ ಪಾಲನ್ನು ಭರಿಸುತ್ತಿದ್ದೇವೆ. ಇದೀಗ ನಮ್ಮ ಜಿಲ್ಲೆಯ ಕಾರ್ಮಿಕ ವರ್ಗವಲ್ಲದೆ, ಹೊರ ಜಿಲ್ಲೆ, ರಾಜ್ಯಗಳ ಕಾರ್ಮಿಕರು ಕೂಡಾ ಕೆಲಸ ಇಲ್ಲದೇ ಉಪವಾಸ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಹೀಗೇ ಮುಂದುವರಿದರೆ ಜಿಲ್ಲೆಯ ಆರ್ಥಿಕತೆಗೆ ಪರಿಣಾಮ ಬೀರಲಿದೆ. ಈ ಸಮಸ್ಯೆ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತಂದರು, ಸಚಿವ ಸಂಪುಟ ಸಭೆ ನಡೆಸಿ ಈ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಮಸ್ಯೆ ಶೀಘ್ರ ಬಗೆಹರಿಸದಿದ್ದರೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದರು.

ಸ್ಯಾಂಡ್‌ ಬಝಾರ್ ಆ್ಯಪ್ ನಲ್ಲೂ ಮರಳು ಲಭ್ಯವಿಲ್ಲ

ಜಿಲ್ಲಾಡಳಿತ ಸ್ಯಾಂಡ್‌ ಬಝಾರ್ ಆ್ಯಪ್ ಮೂಲಕ ಮರಳು ಪಡೆಯಲು ತಿಳಿಸಿದೆ. ಆದರೆ ಈಗ ಆ್ಯಪ್‌ನಲ್ಲೂ ಮರಳು ಇಲ್ಲ. ಗಣಿ ಇಲಾಖೆಯವರು ಈ ಬಗ್ಗೆ ಸ್ಪಂದಿಸುತ್ತಿಲ್ಲ. ಆ್ಯಪ್ ಮೂಲಕ ಸಿಗುವ ಮರಳಿನ ದರ ಹೆಚ್ಚಾಗಿದ್ದು, ಮರಳಿನ ಗುಣಮಟ್ಟ ಮನೆ ನಿರ್ಮಾಣಕ್ಕೆ ಪೂರಕವಾಗಿಲ್ಲ ಎಂದು ಉಪಾಧ್ಯಕ್ಷ ಸತೀಶ್ ಕುಮಾರ್ ಹೇಳಿದರು.

ಇದನ್ನೂ ಓದಿ: ಕೇಂದ್ರದಿಂದ ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌: ಸಂಸದ ಕ್ಯಾ.ಬ್ರಿಜೇಶ್ ಚೌಟ

ಸುದ್ದಿಗೋಷ್ಠಿಯಲ್ಲಿ ಸಂಘದ ಜೊತೆ ಕಾರ್ಯದರ್ಶಿ ಲಕ್ಷ್ಮಿ ಪ್ರಸಾದ್, ಕೋಶಾಧಿಕಾರಿ ಸುರೇಶ್ ಜೆ, ಸದಸ್ಯರಾದ ಚಂದನ್, ಕೇಶವ ಚನ್ನಪ್ಪ ಮೊದಲಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...