ಮಂಗಳೂರು | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಖಾಝಿ, ಉಲಮಾಗಳ ಆಗ್ರಹ

Date:

ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಖಾಝಿಗಳಾದ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಝೈನುಲ್ ಉಲಮಾ ಮಾಣಿ ಉಸ್ತಾದ್ ಸೇರಿದಂತೆ ಪ್ರಮುಖ ಉಲಮಾಗಳು ಆಗ್ರಹಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ವತಿಯಿಂದ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ.ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, “ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಂಟಿ ಸಂಸದೀಯ ಸಮಿತಿಯ ಪರಿಶೀಲನೆಗೆ ನೀಡಲಾಗಿತ್ತು. ಆದರೆ ಪ್ರಸಕ್ತ ಸಮಿತಿಯು ವಿರೋಧ ಪಕ್ಷಗಳ ಪ್ರತಿನಿಧಿಗಳು ಸೂಚಿಸಿದ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿ, ಮೊದಲಿಗಿಂತಲೂ ಅಪಾಯಕಾರಿ ಅಂಶಗಳನ್ನು ಸೇರಿಸಿ ಮಂಡಿಸಿದೆ. ದೇಶದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರಲ್ಲಿ ಅಸುರಕ್ಷತೆಯನ್ನು ಮೂಡಿಸುವ ಮತ್ತು ಅವರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಒದಗಿಸಿರುವ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದ ಈ ವಕ್ಫ್‌ ತಿದ್ದುಪಡಿಯನ್ನು ಕೂಡಲೇ ಕೇಂದ್ರ ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
WhatsApp Image 2025 03 01 at 3.16.07 PM 1

ಸಂವಿಧಾನದಲ್ಲಿರುವ ಆರ್ಟಿಕಲ್ 25, 26, 27 ಮತ್ತು 28, ಜನರ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕು ಎಂದಿವೆ. ಆರ್ಟಿಕಲ್ 26ರ ಎ, ಬಿ, ಸಿ, ಡಿ ಕಲಮುಗಳು ಧಾರ್ಮಿಕ ಆಚರಣೆಯ ಭಾಗವಾಗಿ ಧಾರ್ಮಿಕ ಹಾಗೂ ಸಾಮಾಜಿಕ ಉದ್ದೇಶಗಳಿಗೆ ಸಂಸ್ಥೆಗಳನ್ನು ಕಟ್ಟಿಕೊಳ್ಳುವ, ಧಾರ್ಮಿಕ ವಿಷಯದಲ್ಲಿ ಅದನ್ನು ತಮ್ಮ ಧರ್ಮಾನುಸಾರ ಪಾಲನೆ ಮಾಡುವ, ಸ್ಥಿರ ಹಾಗೂ ಚರಾಸ್ತಿಗಳನ್ನು ಹೊಂದುವ, ಅವುಗಳನ್ನು ಕಾನೂನು ರೀತಿ ನಿರ್ವಹಣೆ ಮಾಡುವ ಹಕ್ಕನ್ನು ನೀಡುತ್ತದೆ.
ಅದರಂತೆ ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್ ಸೇರಿದಂತೆ ಎಲ್ಲಾ ಧರ್ಮೀಯರು ಧಾರ್ಮಿಕ ಸಂಸ್ಥೆಗಳನ್ನು ಕಟ್ಟಿಕೊಂಡು ದೇಣಿಗೆಗಳನ್ನು ಸ್ವೀಕರಿಸುತ್ತಿದ್ದಾರೆ. ಮುಸ್ಲಿಂ ಸಮುದಾಯದ ಧಾರ್ಮಿಕ ದಾನಗಳ ಆಚಾರಗಳನ್ನು ಮುನ್ನಡೆಸಲು ವಕ್ಫ್ ಬೋರ್ಡ್ ಕಾಯ್ದೆಯನ್ನು ರೂಪಿಸಲಾಗಿದೆ. ಇದೀಗ ಕೇಂದ್ರ ಬಿಜೆಪಿ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಲು ಮುಂದಾಗಿದೆ. ಅದರ ವಿರುದ್ಧದ ಹೋರಾಟದ ಮುಂದಿನ ರೂಪುರೇಷೆಗಳನ್ನು ಖಾಝಿಗಳ ಮಾರ್ಗದರ್ಶನದಲ್ಲಿ ಸಿದ್ಧಪಡಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಮಾಡೂರು ಶಾಖಾ ಅಂಚೆ ಕಚೇರಿ ಉದ್ಘಾಟನೆ

ಸುದ್ದಿಗೋಷ್ಠಿಯಲ್ಲಿ ಸೈಯದ್ ಇಸ್ಮಾಯೀಲ್ ತಂಙಳ್ ಉಜಿರೆ, ಉಸ್ಮಾನುಲ್ ಫೈಝಿ ತೋಡಾರು, ಯು.ಕೆ.ಮುಹಮ್ಮದ್ ಸಅದಿ ವಳವೂರು, ಯು.ಕೆ.ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಎಸ್.ಪಿ. ಹಂಝ ಖಾಫಿ ಬಂಟ್ವಾಳ, ಎನ್.ಕೆ.ಎಂ.ಶಾಫಿ ಸಅದಿ ಬೆಂಗಳೂರು, ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ನ, ಕೆ.ಐ.ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ, ಪಿ.ಎಂ. ಉಸ್ಮಾನ ಸಅದಿ ಸೇರಿದಂತೆ ಹಲವು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...