ಮಂಗಳೂರು | ಕ್ಷಣಿಕ ಸುಖಕ್ಕೆ ಜೀವನ ಹಾಳು ಮಾಡಿಕೊಳ್ಳಬೇಡಿ: ಡಿಸಿ ದರ್ಶನ್

Date:

ದೇವರು ನಮಗೆ ಸುಂದರವಾದ ಜೀವನ ನೀಡಿದ್ದಾನೆ. ಅದನ್ನು ಮಾದಕ ವಸ್ತುಗಳ ಸೇವನೆ ಮಾಡುವ ಮೂಲಕ ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತು ಸೇವನೆಯು ಯಾರಿಗೂ ಒಳ್ಳೆಯದು ಅಲ್ಲ. ಅಂತಹ ಕೆಟ್ಟ ಚಟ ಜೀವನದಲ್ಲಿ ಬಾರದಂತೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಹೆಚ್ ವಿ ಹೇಳಿದರು.

- Advertisement -

ಮಂಗಳೂರು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆಯು ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ರೊಫೆಶನಲ್ ಎಜುಕೇಶನ್ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಗುರುವಾರ ಆಯೋಜಿಸಿದ ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಯೌವನದಲ್ಲಿ ಎಲ್ಲವೂ ಸರಿಯಾಗಿ ಕಾಣುತ್ತದೆ. ಆದರೇ ಇಳಿವಯಸ್ಸಿನಲ್ಲಿ ಅದರ ನೋವು ಏನು ಎಂದು ತಿಳಿಯುತ್ತದೆ. ಹೆತ್ತವರಿಗೆ ನಾವು ಕೀರ್ತಿ ತರಬೇಕೆ ಹೊರತು ನೋವು ನೀಡಬಾರದು. ಆದರೆ ಇಂದಿನ ಕೆಲವು ಮಕ್ಕಳು ತಂದೆ ತಾಯಿಗಳಿಗೆ ನೋವು ನೀಡುತ್ತಿರುವುದು ತೀರ ವಿಷಾದನೀಯ. ಕೆಲವರು ಕ್ಷಣಿಕ ಸುಖಕ್ಕಾಗಿ ತಮ್ಮ ಪೂರ್ತಿ ಜೀವನ ಹಾಳು ಮಾಡಿಕೊಳ್ಳುತ್ತಾರೆ. ನಾವು ಒಂದು ವೇಳೆ ಇಂತಹ ಚಟಕ್ಕೆ ಒಳಗಾಗಿದ್ದಾರೆ ಯಾವುದೇ ಸಂಕೋಚವಿಲ್ಲದೇ ಹೆತ್ತವರ ಬಳಿ ಅಥವಾ ನಿಮಗೆ ಮೇಲೆ ನಂಬಿಕೆ ಇರುವವರ ಹತ್ತಿರ ಹೇಳಿಕೊಂಡು ಚಟದಿಂದ ಹೊರಗೆ ಬರಲು ಪ್ರಯತ್ನ ಮಾಡಬೇಕು” ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಮಂಗಳೂರು | ರೈತರ ಹೆಸರಿನಲ್ಲಿ ಅಧಿಕಾರ ಪಡೆದವರು ಈಗ ಕಾರ್ಪೊರೇಟಿಗರ ಗುಲಾಮರು: ಯಾದವ ಶೆಟ್ಟಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ಮಾತನಾಡಿ, “ಮಾದಕವಸ್ತುಗಳಿಗೆ ಗೆಳೆಯರು ದಾಸರಾಗಿದ್ದರೆ ಅವರನ್ನು ಸರಿ ದಾರಿಗೆ ತರುವ ಕೆಲಸ ಸ್ನೇಹಿತರದ್ದೇ ಆಗಿರುತ್ತದೆ. ಎಲ್ಲರೂ ಒಂದುಗೂಡಿದರೆ, ಯಾವುದೇ ಸಮಸ್ಯೆ ದೊಡ್ಡದಾಗಿ ಕಾಣುವುದಿಲ್ಲ. ಎಲ್ಲರೂ ಒಗ್ಗಟ್ಟಾಗಿ ಈ ಪಿಡುಗನ್ನು ಸಮಾಜದಿಂದ ಹೊರಹಾಕಬೇಕು” ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಮಾಡಿಸುವ ಮೂಲಕ ಸಲಹೆ ನೀಡಿದರು.

ಇದನ್ನೂ ಓದಿ: ಮಂಗಳೂರು | ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಡಿಸಿ ಸೂಚನೆ

ನಟ ರೂಪೇಶ್‌ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಿಗೆ, ಯುವಕರಿಗೆ ಮಾದಕವಸ್ತುಗಳ ನಶೆ ಬೇಡ. ನಿಮಗೆ ಜೀವನದಲ್ಲಿ ಸಾಧನೆ ಮಾಡುವ ನಶೆ ಇರಲಿ. ಸಾಧಿಸುವ ನಶೆಯಿದ್ದರೆ ಜೀವನದಲ್ಲಿ ಯಶಸ್ಸು ಸಿಕ್ಕೆ ಸಿಗುತ್ತದೆ. ನಾವು ಬೇರೆಯವರ ಒಳ್ಳೆಯ ಗುಣಗಳನ್ನು ಕಲಿಯಬೇಕೆ ಹೊರತು, ಅವರ ಕೆಟ್ಟ ವಿಷಯಗಳನ್ನಲ್ಲ. ಅವರ ಕೆಟ್ಟ ಗುಣಗಳನ್ನು ಅನುಕರಣೆ ಮಾಡಿದರೆ ಜೀವನ ಹಾಳು ಮಾಡಿಕೊಳ್ಳತ್ತೀರಾ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...