ಮಂಗಳೂರು | ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ

Date:

Advertisements

ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ವಿಸ್ತರಣಾ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಪ್ರದೇಶದಲ್ಲಿ ಭೌಗೋಳಿಕ ಮಾನದಂಡ ಉಲ್ಲಂಘಿಸಿ ನಡೆದಿರುವ ಅವೈಜ್ಞಾನಿಕ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ಮಂಗಳೂರು ನಗರದ ವಾಮಂಜೂರು ಜಂಕ್ಷನ್‌ನಲ್ಲಿ ಭಾನುವಾರ ಪ್ರತಿಭಟನೆ ನಡೆಸಿತು.

ಪ್ರತಿಭಟನಕಾರರನ್ನು ಉದ್ಧೇಶಿಸಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಕುಮಾ‌ರ್ ಬಜಾಲ್‌, “ಗುರುಪುರ ಸೇತುವೆ ನಿರ್ಮಿಸುವ ವೇಳೆ ಕೆತ್ತಿಕಲ್ ಗುಡ್ಡದಿಂದ ಭಾರೀ ಪ್ರಮಾಣದ ಮಣ್ಣು ತೆಗೆಯಲಾಗಿತ್ತು. ಪರ್ಮಿಟ್ ಇಲ್ಲದೆ ಅಕ್ರಮವಾಗಿ ಮಣ್ಣು ಮಾರಾಟ ಮಾಡಲಾಗಿದೆ. ಈ ವಿಷಯ ಗಣಿ ಇಲಾಖೆ ಸಹಿತ ಜಿಲ್ಲಾಡಳಿತಕ್ಕೆ ಗೊತ್ತಿದ್ದರೂ ಮೌನವಾಗಿತ್ತು. ವಯನಾಡು ಸಂತ್ರಸ್ತರಿಗೆ ಕೇರಳ ಸರ್ಕಾರ 500ಕ್ಕೂ ಹೆಚ್ಚು ಮನೆ ನಿರ್ಮಿಸಿ ಕೊಡುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಇಂತಹ ವಿಚಾರಗಳ ಬಗ್ಗೆ ಅಸಡ್ಡೆ ತೋರಿಸುತ್ತಿದೆ. ಜನರ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ” ಎಂದರು.

ಸಂಸದರು ಮತ್ತು ಶಾಸಕರು ಕೆತ್ತಿಕಲ್‌ನ ಜಟಿಲ ಸಮಸ್ಯೆಗೆ ಪರಿಹಾರ ನೀಡುವ ಬದಲು ದ.ಕ. ಜಿಲ್ಲೆಗೆ ‘ಮಂಗಳೂರು’ ಎಂದು ಪುನಃ ನಾಮಕಾರಣ ಮಾಡಲು ಟೊಂಕಕಟ್ಟಿ ನಿಂತಿದ್ದಾರೆ. ಬಡವರ ಕಷ್ಟಗಳಿಗೆ ಸ್ಪಂದಿಸದ ಹಾಗೂ ಉದ್ಯೋಗ ಸೃಷ್ಠಿ ವಿಷಯದಲ್ಲಿ ಆಸಕ್ತಿ ತೋರದ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತಕ್ಕೆ ಧಿಕ್ಕಾರ ಕೂಗಿದರು.

Advertisements

ಇದನ್ನೂ ಓದಿ: ಮಂಗಳೂರು | ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ; ಅರ್ಜಿ ಆಹ್ವಾನ

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಖಜಾಂಚಿ ಮನೋಜ್ ಕುಮಾ‌ರ್ ವಾಮಂಜೂರು, ಸಿಪಿಎಂ ಮುಖಂಡ ಬಾಬು ಸಾಲ್ಯಾನ್, ಡಿವೈಎಫ್‌ಐ ವಾಮಂಜೂರು ವಲಯ ಅಧ್ಯಕ್ಷ ದಿನೇಶ್‌ ಬೊಂಡಂತಿಲ, ಮುಖಂಡರಾದ ಹೊನ್ನಯ್ಯ ಅಮೀನ್‌, ಭವಾನಿ ಇರುವೈಲು, ಬಾಬು ಅಣೆಬಳಿ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X