ಮಂಗಳೂರು | ಅಪಘಾತದಿಂದ ಪಾರು; ಚಾಲಕನ ವಿರುದ್ಧ ಪ್ರಕರಣ; ಪಾದಚಾರಿ ಮಹಿಳೆಗೂ ದಂಡ!

Date:

  • ಮಂಗಳೂರಿನ ತೌಡುಗೋಳಿ ಕ್ರಾಸ್‌ನಲ್ಲಿ ನಡೆದಿದ್ದ ಘಟನೆ,
  • ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದ ಟ್ರಾಫಿಕ್‌ ಪೊಲೀಸರು

ಮಹಿಳೆಯೋರ್ವರನ್ನು ಅಪಘಾತದಿಂದ ಪಾರು ಮಾಡಿದ್ದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಬಳಿಕ ಮಂಗಳೂರು ಪೊಲೀಸರು, ಇದೀಗ ಪವಾಡ ಸದೃಶವಾಗಿ ಪಾರಾಗಿದ್ದ ಪಾದಚಾರಿ ಮಹಿಳೆಗೂ ದಂಡ ವಿಧಿಸಿರುವ ಅಪರೂಪದ ಘಟನೆ ನಡೆದಿದೆ.

ಮಂಗಳೂರು ತಾಲೂಕಿನ ಮಂಜನಾಡಿ-ತೌಡುಗೋಳಿ ಮಾರ್ಗವಾಗಿ ಮುಡಿಪು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸು ವೇಗವಾಗಿ ನರಿಂಗಾನ ಗ್ರಾಮದ ತೌಡುಗೋಳಿ ಎಂಬಲ್ಲಿ ಬರುತ್ತಿದ್ದಾಗ ಮಹಿಳೆಯೊಬ್ಬರು ಬಸ್ಸನ್ನು ಗಮನಿಸದೆ ರಸ್ತೆ ದಾಟಿದ್ದರು. ಈ ಸಂದರ್ಭದಲ್ಲಿ ಚಾಲಕ ತ್ಯಾಗರಾಜ್‌ ಕೈರಂಗಳ ಸಮಯ ಪ್ರಜ್ಞೆ ಮೆರೆದಿದ್ದರಿಂದ ಮಹಿಳೆ ಕೂದಳೆಲೆಯ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದರು.

ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಎಲ್ಲ ಕಡೆ ವೈರಲ್ ಆಗಿತ್ತು. ಅಲ್ಲದೇ, ಹಲವು ಮಾಧ್ಯಮಗಳಲ್ಲಿ ಸುದ್ದಿ ಕೂಡ ಪ್ರಕಟವಾಗಿತ್ತು. ಬಳಿಕ ಈ ವಿಡಿಯೋ ಪೊಲೀಸರಿಗೆ ಸಾಕ್ಷಿಯಾಗಿ ದೊರೆತ ಹಿನ್ನೆಲೆಯಲ್ಲಿ ಚಾಲಕನ ವಿರುದ್ಧ ಕರ್ಕಶ ಹಾರ್ನ್, ಅತಿವೇಗ, ಅಜಾಗರೂಕತೆ ಚಾಲನೆಯ ಕೇಸ್‌ ಜಡಿದಿದ್ದಲ್ಲದೆ, ಬಸ್ಸನ್ನು ವಶಕ್ಕೆ ಪಡೆದು ನಂತರ ಬಿಟ್ಟು ಕಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆ ಬಳಿಕ ಈಗ ಮಹಿಳೆಗೂ ದಂಡ ವಿಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ವಾಹನವನ್ನು ಗಮನಿಸದೆ ಮಹಿಳೆ ರಸ್ತೆ ದಾಟಿದ್ದಾರೆ. ರಸ್ತೆ ದಾಟುವಾಗ ನಿರ್ಲಕ್ಷ್ಯ ತೋರಿದ್ದ ಹಿನ್ನೆಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಕಾಯ್ದೆಯ ಸೆಕ್ಷನ್ 13 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯ 92ಜಿ ಅಡಿಯಲ್ಲಿ ಪಾದಚಾರಿ ಮಹಿಳೆಗೂ ದಂಡವಾಗಿ 100 ರೂಪಾಯಿ ವಿಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ: ಸಾಲುಮರದ ತಿಮ್ಮಕ್ಕ

ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ...

ತುಮಕೂರು | ಸೇವೆ ಮರೆತ ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ

ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಸಂದ ಈ ಸುವರ್ಣ ಸಂದರ್ಭದಲ್ಲಿ...

ರಾಯಚೂರು | ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಅನನ್ಯ: ದುರುಗಣ್ಣ

ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ...

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...