rದಲ್ಲಿ ಕಾರ್ಯಾಚರಿಸುತ್ತಿದ್ದ ಮೀನು ರಫ್ತು ಘಟಕದ ಕಂಪನಿಯಲ್ಲಿ ಭಾನುವಾರ ಮಧ್ಯಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟವಾಗಿರುವುದಾಗಿ ತಿಳಿದುಬಂದಿದೆ.
ಸುರತ್ಕಲ್‌ನ ಕಾಟಿಪಳ್ಳದಲ್ಲಿರುವ ಅಥೆಂಟಿಕ್ ಓಷಿಯನ್ ಟ್ರೆಷರ್(AOT) ಎಂಬ ಕಂಪನಿಯಲ್ಲಿ ಈ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ಕಂಪನಿಯ ಕೋಲ್ಡ್ ಸ್ಟೋರೇಜ್ ಘಟಕ ಮತ್ತು ಕಟ್ಟಿಂಗ್ ವಿಭಾಗದಲ್ಲಿ ಭಾನುವಾರ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕಂಪನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಸಿಬ್ಬಂದಿಗಳು ಯಾರೂ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಬೆಂಕಿ ಅವಘಡ ಘಟನೆಯಿಂದಾಗಿ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜು.18ರಂದು ಪ್ರತಿಭಟನೆ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ
ಬೆಂಕಿ ಅವಘಡದ ವಿಷಯ ತಿಳಿಯುತ್ತಿದ್ದಂತೆಯೇ ಕೈಗಾರಿಕಾ ವಲಯದಲ್ಲಿರುವ ಎಂಆರ್‌ಪಿಎಲ್, ಗೇಲ್ ಇಂಡಿಯಾ ಕಂಪನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು. ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಯ ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ.
