ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಅಥವಾ ಸಾಧನ ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯವುಳ್ಳ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ/ ನಾಡದೋಣಿಗಳನ್ನು ಬಳಸಿ ಮೀನುಗಾರಿಕೆ ಕೈಗೊಳ್ಳಲು ಅನುಮತಿಸಲಾಗಿದೆ. ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ.
ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು | ಸರ್ಕಾರಿ ಜಾಗ ಅತಿಕ್ರಮಿಸಿ ಮೂರ್ತಿ ನಿರ್ಮಾಣ- ‘ಈ ದಿನ’ ವರದಿ ನಂತರ ಅಧಿಕಾರಿಗಳಿಂದ ಕ್ರಮ