ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 10ರ ಸುಮಾರಿಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡ ಬಳಿಕ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಅವಿವಾಹಿತರಾಗಿದ್ದ ಮುಹಮ್ಮದ್ ಅವರು, ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದರು. ಅಖಿಲ ಭಾರತ ಬ್ಯಾರಿ ಸಾಹಿತ್ಯ ಪರಿಷತ್ ಸಹಿತ ಹಲವು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.
ಮೃತದೇಹವು ಮರಕಡ ಕುಂಜತ್ತಬೈಲ್‌ನ ಮನೆಯಲ್ಲಿದ್ದು, ಮರಕಡ ಮಸೀದಿಯಲ್ಲಿ ಅಸರ್ ನಮಾಝಿನ ನಂತರ ಅಂತಿಮ ಸಂಸ್ಕಾರ ನಡೆಸಲಿರುವುದಾಗಿ ಕುಟುಂಬದ ಸದಸ್ಯರಾದ ಬದ್ರುದ್ದೀನ್ ಕೂಳೂರು ಮಾಹಿತಿ ನೀಡಿದ್ದಾರೆ.
