ಮಂಗಳೂರು | ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ಮಾಜಿ ಮೇಯರ್ ಕವಿತಾ ಸನಿಲ್; ಬಿಜೆಪಿ ಸೇರ್ಪಡೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್, ದಿಢೀರ್ ಬೆಳವಣಿಯೊಂದರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್, “ನನ್ನ ರಾಜಕೀಯ ಗುರು, ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ. ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದುಕೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ” ಎಂದು ತಿಳಿಸಿದರು.

Advertisements

“ನಿನ್ನೆ ಹುಬ್ಬಳ್ಳಿಯಲ್ಲಿ ನೇಹಾ ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೇ ಕೊಲೆ ಮಾಡಿದ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ನಮ್ಮ ಜೀವಕ್ಕೆ ಬೆಲೆ ಇಲ್ಲವೇ ಎಂದು ಇವರಲ್ಲಿ ಕೇಳಬೇಕಾಗಿದೆ. ಕಳೆದ ಕೆಲವು ತಿಂಗಳಲ್ಲಿ ಕೊಲೆ ಸರಣಿಯೇ ಆಗಿಹೋಗಿದೆ. ಇದು ಇವರ ಆಡಳಿತ ಸ್ಥಿತಿ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

“ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿರೋದು ನಮ್ಮೆಲ್ಲರ ಭಾಗ್ಯ. ಈ ಸಲದ ಚುನಾವಣೆ ಮೋದಿಗಾಗಿ ಕೊಡುವ ಮತ ಅಲ್ಲ. ರಾಮನಿಗಾಗಿ ಕೊಡುವ ಮತ. ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾವು ಗೆಲ್ಲಿಸಬೇಕಾಗಿದೆ” ಎಂದು ಕವಿತಾ ಸನಿಲ್ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X