ಮಂಗಳೂರು | ಸಾಲ ಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

Date:

  • ಸಾಲದ ಸುಳಿಯಲ್ಲಿ ಸಿಲುಕಿದ್ದ ಮೈಸೂರಿನ ಕುಟುಂಬ
  • ಮೈಸೂರಿನಿಂದ ಮಂಗಳೂರಿಗೆ ಬಂದು ಆತ್ಮಹತ್ಯೆ

ಸಾಲ ಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ವ್ಯಕ್ತಿಗಳು ಮಂಗಳೂರು ಖಾಸಗಿ ಹೋಟೆಲ್‌ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್‌ಗೆ ಆಗಮಿಸಿದ್ದ ಮೈಸೂರು ಮೂಲದ ಕುಟುಂಬ ಗುರುವಾರ ಕೊಠಡಿ ಪಡೆದುಕೊಂಡಿದ್ದರು. ಶುಕ್ರವಾರ ಬೆಳಗ್ಗೆ ಎಷ್ಟು ಸಮಯವಾದರೂ ಬಾಗಿಲು‌ ತೆರೆಯದ ಕಾರಣ ಸಿಬ್ಬಂದಿ ಬಾಗಿಲು ತೆಗೆದು ನೋಡಿದಾಗ ಘಟನೆ ತಿಳಿದು ಬಂದಿದೆ.

ಮೃತಪಟ್ಟ ನಾಲ್ವರಲ್ಲಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿದ್ದರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ಮೂಲದ ದೇವೇಂದ್ರ (48), ಈತನ ಪತ್ನಿ ನಿರ್ಮಲಾ(45), ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೇವೇಂದ್ರ ಅವರು ಸಾಕಷ್ಟು ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದೇ ತಮ್ಮ ಕುಟುಂಬದ ಮೂವರಿಗೆ ವಿಷವುಣಿಸಿದ್ದಾರೆ. ಅವರೆಲ್ಸಾಲರೂ ಮೃತಪಟ್ಟ ನಂತರ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? : ತುಮಕೂರು | ಅರಣ್ಯ ಇಲಾಖೆ, ಪೊಲೀಸ್‌ ಅಧಿಕಾರಿಗಳಿಂದ ಹಲ್ಲೆ; ರೈತರಿಗೆ ಗಂಭೀರ ಗಾಯ

ಮೃತ ವ್ಯಕ್ತಿ ಬರೆದಿರುವ ಮರಣ ಪತ್ರ ಪತ್ತೆಯಾಗಿದ್ದು, “ಸಾಲ ತೀರಿಸಲಾಗಿದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಯಾರೂ ಕಾರಣರಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

ಚಿಕ್ಕಬಳ್ಳಾಪುರ | ನೀರಿನ ಗ್ಯಾರಂಟಿ ಕೊಡುವವರಿಗೆ ಮತ ನೀಡಿ: ಆಂಜನೇಯ ರೆಡ್ಡಿ

ಸುಮಾರು 15 ವರ್ಷಗಳಿಂದ ರಾಜಕೀಯ ಪಕ್ಷಗಳು, ರಾಜಕಾರಣಿಗಳಿಂದ ಭರವಸೆಗಳು ಬಿಟ್ಟರೆ ಅಗತ್ಯವಿರುವ...