ಮಂಗಳೂರಿನ ಕದ್ರಿ ಹಿಲ್ಸ್‌ನಲ್ಲಿರುವ ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಕಾರ್ಕಳ ಪಾಲಿಟೆಕ್ನಿಕ್ ಆವರಣದಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ವಿಸ್ತರಣಾ ಕೆಂದ್ರದಲ್ಲಿ ವಿವಿಧ ಅಲ್ಪಾವಧಿ ಕೌಶಲ್ಯ ತರಬೇತಿಗಳಿಗೆ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೆಜಿಟಿಟಿಐಯಲ್ಲಿ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿಸಿಎನ್‌ಎ), ಸಿಸ್ಕೊ ಐಟಿ ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಇಆರ್ಪಿ/ಪ್ರೈಮ್ ಸೇರಿದಂತೆ ವಿವಿರಧ ಕೋರ್ಸುಗಳು ಲಭ್ಯವಿದೆ.
ಅರ್ಹ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಮಂಗಳೂರು ಅಥವಾ ಕಾರ್ಕಳದಲ್ಲಿರುವ ಕೆಜಿಟಿಟಿಐ ಕಚೇರಿಯಿಂದ ಅರ್ಜಿ ಪಡೆದು ತರಬೇತಿಗೆ ಹೆಸರು ನೊಂದಾಯಿಸಬಹುದು.
ಹೆಚ್ಚಿನ ಮಾಹಿತಿಗೆ ದೂ.ಸಂ: 0824-2211477, 8277741731ನ್ನು ಸಂಪರ್ಕಿಸಬಹುದು ಎಂದು ಕೆಜಿಟಿಟಿಐ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನ