ಮಂಗಳೂರು | ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ

Date:

ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಮಂಗಳೂರಿನ ಕಾನೂನು ಪದವೀಧರರಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.2.50 ಲಕ್ಷವನ್ನು ಮೀರಿರಬಾರದು.  ಪ್ರವರ್ಗ-1 ರ ಅಭ್ಯರ್ಥಿಗಳು 40 ವರ್ಷಗಳು ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷದೊಳಗಿನ ಗರಿಷ್ಠ ವಯೋಮಿತಿಯವರಾಗಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ತರಬೇತಿ ಅವಧಿಯಲ್ಲಿ ಹಾಜರಾತಿಗನುಸಾರವಾಗಿ ತಿಂಗಳಿಗೆ ರೂ.4 ಸಾವಿರ ತರಬೇತಿ ಭತ್ಯೆಯನ್ನು ಪಾವತಿಸಲಾಗುತ್ತದೆ.
ಅರ್ಜಿಯೊಂದಿಗೆ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ, ಪದವಿ/ಕಾನೂನು ಪದವಿಯ ಅಂಕ ಪಟ್ಟಿಗಳು, ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾಗಿರುವ ಬಗ್ಗೆ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ ಮತ್ತು ಇತ್ತೀಚಿನ ಎರಡು ಭಾವಚಿತ್ರ (ಪಾಸ್‍ಪೋರ್ಟ್ ಸೈಜ್) ಗಳನ್ನು ಲಗತ್ತಿಸಬೇಕು. ಅರ್ಜಿಯನ್ನು ಆಗಸ್ಟ್ 18 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಅಥವಾ ನಿಗದಿತ ಅರ್ಜಿ ನಮೂನೆಯನ್ನು ಬಿಜೈ-ಕಾಪಿಕಾಡ್, ಆನೆಗುಂಡಿ ರೋಡ್‍ನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಯವರ ಕಚೇರಿ, ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...

ವಿಜಯಪುರ | ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಪ್ರೊ. ಎಸ್ ಇಂದುಮತಿ

ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು....

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು....