ಭಾರತೀಯ ರೆಡ್ ಕ್ರಾಸ್ ಸೊಸೈಟಿ(ಐಆರ್ಸಿಎಸ್)ಯ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಹಳೆ ಡಿಸಿ ಕಚೇರಿ ಆವರಣದಲ್ಲಿ ರೂ.6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡ’ ಶನಿವಾರ ರಾಜ್ಯಪಾಲ ಹಾಗೂ ಐಆರ್ಸಿಎಸ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಥಾವರ್ ಚಂದ್ ಗೆಹ್ಲೋಟ್ ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ರೆಡ್ ಕ್ರಾಸ್ ಮಾನವೀಯ ಸೇವೆಯ ಪ್ರತೀಕವಾಗಿದೆ. ಕೋವಿಡ್ ಸಂದರ್ಭದಲ್ಲಿ ಜನರಿಗೆ ಉತ್ತಮ ಸೇವೆಯನ್ನು ನೀಡಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ರೆಡ್ ಕ್ರಾಸ್‌ನ ಕರ್ನಾಟಕದ ಘಟಕವು ತನ್ನ ಸೇವಾ ಕಾರ್ಯಗಳಿಂದ ರಾಷ್ಟ್ರ ಮಟ್ಟದಲ್ಲಿ ಎರಡು ಬಾರಿ ಪ್ರಶಸ್ತಿ ಪಡೆದುಕೊಂಡಿದೆ ಎಂದರು. ಇದೇ ವೇಳೆ ರೆಡ್ ಕ್ರಾಸ್‌ನ ಶತಮಾನೋತ್ಸವ ನೆನಪಿನ ಭವ್ಯ ಕಟ್ಟಡವನ್ನು ನಿರ್ಮಿಸಿರುವ ದ.ಕ.ಜಿಲ್ಲಾ ಘಟಕವನ್ನುಶ್ಲಾಘಿಸಿದರು.
ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ರೆಡ್ ಕ್ರಾಸ್ ವಿದ್ಯಾರ್ಥಿ ಸಮುದಾಯದಲ್ಲಿ ಮಾನವೀಯ ಮೌಲ್ಯಗಳನ್ನು ಮೂಡಿಸುವ ಸಂಘಟನೆಯಾಗಿದೆ ಎಂದರು.
ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ
ಕಾರ್ಯಕ್ರಮದಲ್ಲಿ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಐಆರ್ಸಿಎಸ್ ರಾಜ್ಯ ಘಟಕದ ಉಪಾಧ ಭಾಸ್ಕರ ರಾವ್, ರೆಡ್ ಕ್ರಾಸ್ ಜಿಲ್ಲಾ ಘಟಕದ ಚೆಯರ್ ಮ್ಯಾನ್ ಸಿಎ ಶಾಂತಾರಾಮ ಶೆಟ್ಟಿ ಇದ್ದರು.
