ಮಂಗಳೂರು | ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ

Date:

Advertisements

ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನು 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಈ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು.

ಕಟ್ಟಡಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಯಾವ ಖಾಸಗಿ ಆಸ್ಪತ್ರೆಗಳಿಗೂ ಕಡಿಯಿ ಇಲ್ಲದಂತೆ ಅತ್ಯಂತ ಸುಸಜ್ಜಿತವಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಸ್ಪೆಷಾಲಿಟಿ ಬ್ಲಾಕ್ ಅನ್ನ ನಿರ್ಮಿಸಲಾಗಿದೆ” ಎಂದರು.‌

“ಜಿಲ್ಲಾಸ್ಪತ್ರೆಯಾಗಿ ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಮಾದರಿಯಾಗಿದೆ. ಖಾಸಗಿ ಸಂಸ್ಥೆ ಕೆಎಂಸಿ ಯವರೊಂದಿಗೆ ಒಪ್ಪಂದದ ಮೂಲಕ ವೆನ್ಲಾಕ್ ಆಸ್ಪತ್ರೆ ಹಲವು ವರ್ಷಗಳಿಂದ ಸೂಪರ್ ಸ್ಪೆಷಾಲಿಟಿ ಆರೋಗ್ಯ ಚಿಕಿತ್ಸೆಗಳನ್ನ ಒದಗಿಸಿತ್ತಾ ಬಂದಿದೆ. ಇದೀಗ 250 ಹಾಸಿಗೆಯ ನೂತನ ಸರ್ಜಿಕಲ್ ಬ್ಲಾಕ್ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ನೆರವಾಗಲಿದೆ” ಎಂದರು.‌

Advertisements
wenclk4

“ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಅಳವಡಿಸಲಾಗಿದೆ. 17 ಕೋಟಿ ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಕೂಡಾ ಆಸ್ಪತ್ರೆಗೆ ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು” ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ವೆನ್ಲಾಕ್ ಆಸ್ಪತ್ರೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಷ್ಟೇ ಅಲ್ಲ, ಸುತ್ತಮುತ್ತಲಿನ ಕರಾವಳಿ‌ ಹಾಗೂ ಮಲೆನಾಡು ಭಾಗದ ಹತ್ತಾರು ಜಿಲ್ಲೆಗಳ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಾ ಬಂದಿದೆ. ಆರೋಗ್ಯ ಸಚಿವನಾಗಿ ವೆನ್ಲಾಕ್ ಆಸ್ಪತ್ರೆಗೆ ಅಗತ್ಯ ಎಲ್ಲ ನೆರವು ನೀಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.‌

ಆಸ್ಪತ್ರೆಯ ನೂತನ ಸರ್ಜಿಕಲ್ ಬ್ಲಾಕ್ ಒಟ್ಟು 7 ಅಂತಸ್ತುಗಳ ಕಟ್ಟಡವನ್ನು ಹೊಂದಿದ್ದು, 250 ಹಾಸಿಗೆಗಳ ಸೌಲಭ್ಯ ಹೊಂದಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್‌ಲ್ಯಾಬ್ ಮತ್ತು ರೇಡಿಯೋಲಜಿ ವಿಭಾಗಗಳಿವೆ. ನೆಲ ಅಂತಸ್ತಿನಲ್ಲಿ 15 ಹಾಸಿಗೆಗಳ ತುರ್ತು ಚಿಕಿತ್ಸಾ ವಿಭಾಗ, 8 ಹಾಸಿಗೆಗಳ ತುರ್ತು ಚಿಕಿತ್ಸಾ ಐಸಿಯು, ಎಂಡೋಸ್ಕೋಪಿ ಮತ್ತು ತುರ್ತು ಶಸ್ತ್ರಚಿಕಿತ್ಸಾ ಕೊಠಡಿಗಳಿವೆ.

ಒಂದನೇ ಮಹಡಿಯಲ್ಲಿ 60 ಹಾಸಿಗೆಗಳ ಇ.ಎನ್.ಟಿ. ಮತ್ತು ಯುರಾಲಜಿ ಶಸ್ತ್ರಚಿಕಿತ್ಸಾ ವಾರ್ಡ್‌ಗಳು ಮತ್ತು ಎರಡನೇ ಮಹಡಿಯಲ್ಲಿ 70 ಹಾಸಿಗೆಗಳ ನ್ಯೂರೊ ಸರ್ಜರಿ, ಕಾರ್ಡಿಯೋಥೈರಾಸಿಕ್ ಸರ್ಜರಿ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ವಾರ್ಡ್‌ಗಳಿವೆ. ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ, ಪ್ರತಿ ಅಂತಸ್ತಿನಲ್ಲಿ 5 ರಂತೆ ಒಟ್ಟು 10 ಸುಸಜ್ಜಿತವಾದ ಶಸ್ತ್ರಚಿಕಿತ್ಸಾ ಕೊಠಡಿಗಳಿವೆ ಮತ್ತು ತಲಾ 10 ಹಾಸಿಗೆಗಳ ಶಸ್ತ್ರಚಿಕಿತ್ಸಾ ಪೂರ್ವ ಮತ್ತು 15 ಹಾಸಿಗೆಗಳ ಶಸ್ತ್ರಚಿಕಿತ್ಸಾ ನಂತರದ ವಾರ್ಡ್ ಲಭ್ಯವಿದೆ.

wenclok2

ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಕಟ್ಟಡಕ್ಕೆ ಆಧುನಿಕ ವೈದ್ಯಕೀಯ ತಂತ್ರಜ್ಞಾನಕ್ಕೆ ಅನುಗುಣವಾಗಿ ಯಂತ್ರೋಪಕರಣಗಳ ಅಗತ್ಯತೆಯನ್ನು ಮನಗಂಡು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಮುತುವರ್ಜಿಯಿಂದ ಸ್ಮಾರ್ಟ್‌ ಸಿಟಿ ವತಿಯಿಂದ 7 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಒದಗಿಸಲಾಗಿದ್ದು, ಸರಕಾರದ ವತಿಯಿಂದ 2 ಕೋಟಿ ಮತ್ತು ಕೆ.ಎಂ.ಸಿ. ವತಿಯಿಂದ 4 ಕೋಟಿ ರೂಪಾಯಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗಿದೆ.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಅಶೋಕ್ ಕುಮಾರ್ ರೈ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಐವನ್ ಡಿಸೋಜಾ, ಶಾಹುಲ್ ಹಮೀದ್, ಮಮತಾ ಗಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

wenlcok
wenlock1
wenlcok3
wenclok4
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X