ಮಂಗಳೂರು | ಡಿಎಲ್‌ಇಡಿ, ಡಿಪಿಇಡಿ ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನ

Date:

2025-26ನೇ ಸಾಲಿನಲ್ಲಿ ಡಿಎಲ್‌ಇಡಿ(ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಮತ್ತು ಡಿಪಿಇಡಿ(ದೈಹಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಕೋರ್ಸ್‌ಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.inನಲ್ಲಿರುವ ದಾಖಲಾತಿ ಅರ್ಜಿಯನ್ನು ಮುದ್ರಿಸಿಕೊಂಡು ಭರ್ತಿ ಮಾಡಿ ಅಥವಾ ಡಯಟ್ ವ್ಯವಸ್ಥಾಪಕ ಕೇಂದ್ರವನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ಡಯಟ್‍ಗಳಿಗೆ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಶೈಕ್ಷಣಿಕ ವಿದ್ಯಾರ್ಹತೆ

ಡಿಎಲ್‌ಇಡಿ ಕೋರ್ಸ್: ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ 45% ಮತ್ತು ಇತರೆ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ 50% ಅಂಕಗಳನ್ನು ಪಡೆದಿರಬೇಕು.

ಡಿಪಿಇಡಿ ಕೋರ್ಸ್: ಡಿಪಿಇಡಿ ಕೋರ್ಸಿಗೆ ಸೇರುವ ಎಲ್ಲ ಅಭ್ಯರ್ಥಿಗಳು ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಟ 50% ಅಂಕಗಳನ್ನು ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ರಾಜ್ಯ ಅಥವಾ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಪಾಲ್ಗೊಂಡಿದ್ದು ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಕನಿಷ್ಟ 45% ಅಂಕಗಳನ್ನು ಪಡೆದಿರಬೇಕು.

ದಾಖಲಾತಿ ಅರ್ಜಿಗಳನ್ನು ಸಲ್ಲಿಸಲು‌, ಬ್ಯಾಂಕ್‍ಗೆ ನಿಗಧಿತ ಶುಲ್ಕ ಪಾವತಿಸಲು ಜೂನ್ 5 ಕೊನೆಯ ದಿನ.

ಅರ್ಜಿಯನ್ನು ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಮೀಸಲಾತಿ ವಿವರಗಳು ಹಾಗೂ ಇತರೆ ಸೂಚನೆಗಳನ್ನು ವೆಬ್‍ಸೈಟ್ www.schooleducation.kar.nic.inನಲ್ಲಿ ಪ್ರಕಟಿಸಲಾಗಿದೆ. ವೆಬ್‍ಸೈಟ್‍ನಲ್ಲಿನ ಮಾಹಿತಿಗಳನ್ನು ಓದಿ, ಅರ್ಜಿ ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ವ್ಯವಸ್ಥಾಪಕ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಕಚೇರಿಗೆ ನಿಗಧಿತ ಅಂತಿಮ ದಿನಾಂಕದ ಒಳಗೆ ಸಲ್ಲಿಸಬೇಕು.

ಇದ್ದನ್ನೂ ಓದಿದ್ದೀರಾ? ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‌: ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗೆ ಕೇಂದ್ರೀಕೃತ ದಾಖಲಾತಿ ಘಟಕದ ದೂರವಾಣಿ ಸಂಖ್ಯೆ:080-22483140 ಮತ್ತು 080-22483145 ಹಾಗೂ ಮಂಗಳೂರು ಕೊಡಿಯಾಲ್‍ಬೈಲು ಜೈಲ್‍ ರಸ್ತೆಯಲ್ಲಿರುವ -2493052, ಮೊಬೈಲ್: 8747857070) ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಹಾಗೂ ಪದನಿಮಿತ್ತ ಉಪನಿರ್ದೇಶಕಿ ರಾಜಲಕ್ಷ್ಮೀ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...