ದಕ್ಷಿಣ ಕನ್ನಡ | ವಿಶ್ವಶಾಂತಿಗೆ ಜೈನ ಧರ್ಮದ ಕೊಡುಗೆ ಅಪಾರ: ಸಚಿವ ದಿನೇಶ್ ಗುಂಡೂರಾವ್

Date:

Advertisements

ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮಾರಸ್ಯದ ಬದುಕಿಗೆ ಜೈನ‌ ಧರ್ಮದ ಕೊಡುಗೆ ಅಪಾರವಾಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶುಕ್ರವಾರ (ಮಾ.1) ಮಂಗಳೂರಿನ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಸಮಾರೋಪದಲ್ಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತ್ಯಾಗ, ಸಹನೆಯ ಪ್ರತೀಕವಾಗಿ ಜೈನ ಧರ್ಮವು ಜಗತ್ತಿನಲ್ಲಿ ಅಹಿಂಸೆಯ ಸಂದೇಶ ಹರಡಿದೆ. ಕರ್ನಾಟಕದಲ್ಲಿ ಶ್ರವಣಬೆಳಗೊಳ, ಧರ್ಮಸ್ಥಳ, ಕಾರ್ಕಳ, ವೇಣೂರಿನಲ್ಲಿರುವ ಬಾಹುಬಲಿ ರಾಜ್ಯದ ಶ್ರೀಮಂತ ಸಂಸ್ಕೃತಿ, ಧಾರ್ಮಿಕತೆಯ ಸಂಕೇತವಾಗಿದೆ. ಚಿಕ್ಕಂದಿನಿಂದಲೂ ತಾನು ಹಲವಾರು ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜೀವನದ ಪುಣ್ಯವಾಗಿದೆ ಎಂದು ಅವರು ಹೇಳಿದರು.

ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ರಸ್ತೆ ಸೇರಿದಂತೆ ಎಲ್ಲ ಅಗತ್ಯ ಮೂಲ ಸೌಕರ್ಯವನ್ನು ರಾಜ್ಯ ಸರಕಾರ ಒದಗಿಸಿದೆ. ಮಸ್ತಕಾಭಿಷೇಕಕ್ಕೆ ಅನುದಾನವನ್ನು ನೀಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Advertisements

ಸಮಾರಂಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಪ್ರತಾಪ ಸಿಂಹ ನಾಯಕ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತಿತರರು ಇದ್ದರು.

ಸಚಿವರು ಬಾಹುಬಲಿ ಮಸ್ತಕಾಭಿಷೇಕ ಕಾರ್ಯಕ್ರಮ ವೀಕ್ಷಿಸಿದರು. ನಂತರ ಮಸ್ತಕಾಭಿಷೇಕ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿರುವ ರಾಜ್ಯ ಸರಕಾರದ ವಿವಿಧ ಯೋಜನೆಗಳ ಮಾಹಿತಿ ನೀಡುವ ವಸ್ತುಪ್ರದರ್ಶನವನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X