ದಕ್ಷಿಣ ಕನ್ನಡ | ವಿಶ್ವಶಾಂತಿಗೆ ಜೈನ ಧರ್ಮದ ಕೊಡುಗೆ ಅಪಾರ: ಸಚಿವ ದಿನೇಶ್ ಗುಂಡೂರಾವ್

Date:

ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮಾರಸ್ಯದ ಬದುಕಿಗೆ ಜೈನ‌ ಧರ್ಮದ ಕೊಡುಗೆ ಅಪಾರವಾಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶುಕ್ರವಾರ (ಮಾ.1) ಮಂಗಳೂರಿನ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಸಮಾರೋಪದಲ್ಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತ್ಯಾಗ, ಸಹನೆಯ ಪ್ರತೀಕವಾಗಿ ಜೈನ ಧರ್ಮವು ಜಗತ್ತಿನಲ್ಲಿ ಅಹಿಂಸೆಯ ಸಂದೇಶ ಹರಡಿದೆ. ಕರ್ನಾಟಕದಲ್ಲಿ ಶ್ರವಣಬೆಳಗೊಳ, ಧರ್ಮಸ್ಥಳ, ಕಾರ್ಕಳ, ವೇಣೂರಿನಲ್ಲಿರುವ ಬಾಹುಬಲಿ ರಾಜ್ಯದ ಶ್ರೀಮಂತ ಸಂಸ್ಕೃತಿ, ಧಾರ್ಮಿಕತೆಯ ಸಂಕೇತವಾಗಿದೆ. ಚಿಕ್ಕಂದಿನಿಂದಲೂ ತಾನು ಹಲವಾರು ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜೀವನದ ಪುಣ್ಯವಾಗಿದೆ ಎಂದು ಅವರು ಹೇಳಿದರು.

ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ರಸ್ತೆ ಸೇರಿದಂತೆ ಎಲ್ಲ ಅಗತ್ಯ ಮೂಲ ಸೌಕರ್ಯವನ್ನು ರಾಜ್ಯ ಸರಕಾರ ಒದಗಿಸಿದೆ. ಮಸ್ತಕಾಭಿಷೇಕಕ್ಕೆ ಅನುದಾನವನ್ನು ನೀಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಮಾರಂಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಪ್ರತಾಪ ಸಿಂಹ ನಾಯಕ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತಿತರರು ಇದ್ದರು.

ಸಚಿವರು ಬಾಹುಬಲಿ ಮಸ್ತಕಾಭಿಷೇಕ ಕಾರ್ಯಕ್ರಮ ವೀಕ್ಷಿಸಿದರು. ನಂತರ ಮಸ್ತಕಾಭಿಷೇಕ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿರುವ ರಾಜ್ಯ ಸರಕಾರದ ವಿವಿಧ ಯೋಜನೆಗಳ ಮಾಹಿತಿ ನೀಡುವ ವಸ್ತುಪ್ರದರ್ಶನವನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಶಾಲಾ-ಕಾಲೇಜು ಬಳಿ ತಂಬಾಕು ಮಾರಾಟ; ಕಳೆದ ವರ್ಷ 100 ಪ್ರಕರಣ ದಾಖಲು

2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಶಾಲಾ-ಕಾಲೇಜು ಅಥವಾ ಶಿಕ್ಷಣ...

ಬೆಂಗಳೂರು | ಮಳೆಯಿಂದ ಉಂಟಾಗುವ ಸಮಸ್ಯೆ ಬಗೆಹರಿಸಲು ಸಹಾಯವಾಣಿ ತೆರೆದ ಬಿಬಿಎಂಪಿ, ಬೆಸ್ಕಾಂ

ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಎನ್‌ಐಎ ವಶಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...

ಬಾಗಲಕೋಟೆ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ; ಮೆಳ್ಳಿಗೇರಿಯ ಅಂಕಿತಾ ರಾಜ್ಯಕ್ಕೆ ಪ್ರಥಮ

2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಮುಧೋಳ...