ಮಂಗಳೂರು | ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

Date:

Advertisements

ಪತ್ರಿಕೋದ್ಯಮದ ಹೃದಯ ಬಡಿತವೇ ನಿರ್ಭೀತ ವರದಿಗಾರಿಕೆ. ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ಮಂಗಳೂರು ನಗರದ ಪ್ರೆಸ್‍ಕ್ಲಬ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಪತ್ರಕರ್ತ ವಿಜಯ ಕೋಟ್ಯಾನ್‍ ಅವರಿಗೆ ಪ್ರಸಕ್ತ ಸಾಲಿನ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ರಷ್ಯಾದ ಪತ್ರಕರ್ತೆಯಾಗಿದ್ದ ಅನ್ನಾ ಪೊಲಿಟ್ಕೋವಸ್ಕಾಯರ ನಿರ್ಭೀತ ವರದಿಗಾರಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಸುಧೀರ್ ಕುಮಾರ್ ರೆಡ್ಡಿ, ಭಾರತದಲ್ಲಿಯೂ ಅಂತಹ ಪತ್ರಕರ್ತರಿದ್ದಾರೆ. ತಾವು ಮಾಡುವ ಕೆಲಸದಲ್ಲಿ ನೈಜ ಉದ್ದೇಶ ಇದ್ದಾಗ ಧೈರ್ಯ ತಾನಾಗಿಯೇ ಬರುತ್ತದೆ. ಯಾವುದಕ್ಕೂ ಭಯ ಪಡುವ ಅಗತ್ಯ ಇರುವುದಿಲ್ಲ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

Advertisements
WhatsApp Image 2025 06 25 at 7.29.19 PM 1

ಬಹಳ ವರ್ಷಗಳ ಹಿಂದೆ ರುವಾಂಡದಲ್ಲಿ ನರಮೇಧ ನಡೆದಿತ್ತು. ಬಳಿಕ ಅಲ್ಲಿ ಸಮುದಾಯಗಳು ಪರಸ್ಪರ ಪ್ರತ್ಯೇಕಗೊಂಡಿದ್ದವು. ಒಬ್ಬರಿಗೊಬ್ಬರು ಮಾತುಕತೆಯೇ ಇರಲಿಲ್ಲ. ಆದರೆ ಅಲ್ಲಿನ ರೇಡಿಯೋ, ಮಾಧ್ಯಮ ಸುದ್ದಿಗಳು ಅಲ್ಲಿ ನಡೆಯುತ್ತಿದ್ದ ಒಳ್ಳೆಯತನವನ್ನು ಎತ್ತಿ ತೋರಿಸಿದವು. ನಿಧಾನಗತಿಯಲ್ಲಿ ಸಮುದಾಯಗಳ ನಡುವಿನ ಅನುಮಾನ ದೂರವಾಗಿ ಅಲ್ಲಿ ದುಷ್ಕರ್ಮಿಗಳನ್ನು ಬೇರ್ಪಡಿಸುವ ಕಾರ್ಯ ಆಗಿದೆ. ಅದೇ ಪ್ರಯತ್ನ ಇಲ್ಲಿಯೂ ಮಾಡಬಹುದು. ಆ ಧೈರ್ಯ, ಬದ್ಧತೆ ನಮಗೆ ಬೇಕಾಗಿದೆ ಎಂದು ಪೊಲೀಸ್ ಕಮಿಷನರ್ ಅಭಿಪ್ರಾಯಿಸಿದರು.

ಇಂತಹ ಪ್ರದೇಶದಲ್ಲಿ ನಾವು ಸಾಮಾನ್ಯವಾಗಿ ವರದಿಗಾರಿಕೆ ಮಾಡಬೇಕಾದರೆ ಏನು ಬೇಕು ಎಂಬುದನ್ನು ನಾವು ಅರಿಯಬೇಕು. ವರದಿಯನ್ನು ತಲುಪಿಸುವ ವೇಗಕ್ಕಿಂತ ನಿಖರತೆ ಮುಖ್ಯ. ಬಾಯಿಗೆ ಬಂದದ್ದನ್ನು ಹೇಳಿ ಬಿಟ್ಟು ಅದರಿಂದ ಇನ್ನೊಂದು ಅನ್ಯಾಯ ಆಗಲು ಅವಕಾಶ ನೀಡುವ ಬದಲು ಬರೆಯುವ ಸುದ್ದಿಯ ನಿಖರತೆ ಮುಖ್ಯವಾಗಿರುತ್ತದೆ ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ವಿಮಾನ ನಿಲ್ದಾಣದಲ್ಲಿ ಇರಾನ್‌ನ ಪುಟ್ಟ ಬಾಲಕನನ್ನು ಮೇಲಕ್ಕೆತ್ತಿ ನೆಲಕ್ಕೆ ಬಡಿದ ಯಹೂದಿ ವ್ಯಕ್ತಿ: ಸ್ಥಿತಿ ಗಂಭೀರ

ಯಾವುದೇ ಸಮಸ್ಯೆಗಳ ಸಂದರ್ಭ ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವುದಕ್ಕಿಂತಲೂ ಸತ್ಯವನ್ನು ಎತ್ತಿ ತೋರಿಸುವುದು ಪ್ರಮುಖವಾಗಬೇಕು. ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಆರೋಪಿ ಮತ್ತು ಸಂತ್ರಸ್ತರನ್ನು ಒಂದೇ ಆಗಿ ಪರಿಗಣಿಸಲಾಗದು. ಸತ್ಯದ ಬಗ್ಗೆ ಬರೆಯುವಾಗ ಸಮಸ್ಯೆ ಖಂಡಿತಾ ಬರುತ್ತದೆ. ಆದರೆ ಸತ್ಯ ಬರೆಯುವಾಗ ಯಾವುದೇ ರೀತಿಯ ಯಾವುದೇ ಭಯ ಬೇಡ. ಜತೆಗೆ ಸಹಾನುಭೂತಿ ಬರವಣಿಗೆಯಲ್ಲಿ ಇದ್ದಾಗ ಯಾರಿಗೂ ಸಮಸ್ಯೆ ಬರುವುದಿಲ್ಲ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪತ್ರಕರ್ತರಾದ ಪುಷ್ಪರಾಜ್, ಜಿತೇಂದ್ರ ಕುಂದೇಶ್ವರ ಮತ್ತಿತತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X