ಮಂಗಳೂರು | ಡಿಸೆಂಬರ್ 21ರಿಂದ ಜನವರಿ 19 ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವ’

Date:

Advertisements

“ಡಿಸೆಂಬರ್ 21ರಿಂದ ಜನವರಿ 19ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವ’ವನ್ನು ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರಾವಳಿಯ ರಾಜಕೀಯ ಮುಖಂಡರೊಂದಿಗೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕರಾವಳಿಯ ನೈಜ ಸಂಸ್ಕೃತಿಯ ಅನಾವರಣ, ಸಂಪ್ರದಾಯಗಳ ಪ್ರದರ್ಶನ, ಆಹಾರ ಖಾದ್ಯಗಳ ಪರಿಚಯ, ವಿವಿಧ ವಿನೋದಾವಳಿಗಳೊಂದಿಗೆ ನಮ್ಮ ಧೀಮಂತ ಸಾಂಸ್ಕೃತಿಕ ಪರಂಪರೆಯ ಆಸ್ವಾದನೆ ಇರಲಿದೆ. ಇವೆಲ್ಲವೂ ಒಂದೇ ಜಾಗದಲ್ಲಿ ತುಳುನಾಡಿನ ಜನತೆಗೆ ಲಭ್ಯವಾಗಲಿವೆ. ಕೆಲವು ವರ್ಷಗಳ ಬಳಿಕ ಇದೇ ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವ’ ಮೈದಳೆಯಲಿದೆ. ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿರುವ ಉತ್ಸವದಲ್ಲಿ ಕರಾವಳಿಯ ವೈವಿಧ್ಯತೆಗಳು ಸಾರ್ವಜನಿಕರನ್ನು ರಂಜಿಸಲಿವೆ” ಎಂದು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮ

Advertisements

ಡಿಸೆಂಬರ್ 21ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಸಂಜೆ 4 ಗಂಟೆಗೆ ಕೊಡಿಯಾಲ್ ಬೈಲ್‌ನ ಕೆನರಾ ಕಾಲೇಜಿನಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ.

ಕರಾವಳಿ 1

ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ ಮತ್ತು ವೈವಿಧ್ಯಮಯ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಕಲಾವಿದರ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಸಂಜೆ 5.30ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ಈ ಬಾರಿಯ ಕರಾವಳಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಡಿಸೆಂಬರ್ 21 ಮತ್ತು 22 ರಂದು ವಿದ್ಯುದ್ದೀಪಗಳಿಂದ ಅಲಂಕೃತವಾದ ವೇದಿಕೆಯಲ್ಲಿ ಪ್ರಸಿದ್ಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ.

“ಜಾಗತಿಕ ಹಳ್ಳಿ” (Global Village) ಎಂಬ ಧ್ಯೇಯದೊಂದಿಗೆ ವಸ್ತು ಪ್ರದರ್ಶನ

ವಸ್ತು ಪ್ರದರ್ಶನವು “ಜಾಗತಿಕ ಹಳ್ಳಿ” (Global Village) ಎಂಬ ಧ್ಯೇಯದೊಂದಿಗೆ ಕರಾವಳಿಯ ನೈಜ ಸಂಸ್ಕೃತಿ, ಸಂಪ್ರದಾಯ, ಸಾಹಿತ್ಯ, ಉಡುಗೆ ತೊಡುಗೆ ಮತ್ತು ಖಾದ್ಯಗಳನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. ವಿವಿಧ ಜನಾಂಗದ ರೀತಿ ರಿವಾಜುಗಳನ್ನು ಪರಿಚಯಿಸಲು ಪ್ರತ್ಯೇಕ ವಿಭಾಗಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇಲ್ಲಿ ಕೈಮಗ್ಗ, ನೇಕಾರ, ಕುಂಬಾರ, ಕರಕುಶಲ ವಸ್ತುಗಳ ತಯಾರಿಕೆ ಮತ್ತು ಇನ್ನಿತರ ಕೌಶಲ್ಯಗಳ ಅನಾವರಣವಾಗಲಿದೆ. ಆದಿವಾಸಿ ಮತ್ತು ಗುಡ್ಡಗಾಡು ಜನಾಂಗದ ಸಾಂಪ್ರದಾಯಿಕ ಉತ್ಪನ್ನಗಳ ಸಹ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಆಹಾರ ಮೇಳ

ಕರಾವಳಿಯು ತನ್ನದೇ ಆದ ವಿಶಿಷ್ಟ ಆಹಾರ ಪದ್ದತಿಯನ್ನು ಹೊಂದಿದೆ. ವೈವಿಧ್ಯಮಯ ಖಾದ್ಯಗಳ ತಯಾರಿಕೆ. ಪ್ರದರ್ಶನ ಮತ್ತು ಮಾರಾಟಗಳನ್ನು ಒಂದೇ ಸೂರಿನಡಿ ಏರ್ಪಡಿಸಲಾಗಿದ್ದು, ತುಳು ನಾಡಿನ ತಿಂಡಿ ತಿನಿಸುಗಳನ್ನು ಪರಿಚಯ ಮಾಡಿಕೊಳ್ಳಲು ಮತ್ತು ಸವಿಯಲು ಸಾರ್ವಜನಿಕರಿಗೆ ಇದೊಂದು ಅಪರೂಪದ ಅವಕಾಶವಾಗಿದೆ.

ವಾಣಿಜ್ಯ ಮಳಿಗೆ

ಆಹಾರ ಉತ್ಪನ್ನಗಳು ಮಾತ್ರವಲ್ಲದೆ, ಉಡುಗೆ ತೊಡುಗೆಗಳು ಮತ್ತು ವಿವಿಧ ವಾಣಿಜ್ಯ ಮಳಿಗೆಗಳಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ. ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ವಿವಿಧ ವಿನೋದಾವಳಿಗಳು ಎಲ್ಲ ವಯಸ್ಸಿನವರೆಗೂ ಮನೋರಂಜನೆ ನೀಡಲಿವೆ.

ಕರಾವಳಿ1

ಬೀಚ್ ಉತ್ಸವ

ಡಿಸೆಂಬರ್ 28 ಮತ್ತು 29ರಂದು ತಣ್ಣೀರು ಬಾವಿ ಬೀಚ್‌ನಲ್ಲಿ ಬೀಚ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಸಂಜೆ 6 ಗಂಟೆಗೆ ಬೀಚ್ ಉತ್ಸವ ಉದ್ಘಾಟನೆಗೊಳ್ಳಲಿದೆ. ಸಂಜೆ 6.30 ರಿಂದ ವಿವಿಧ ತಂಡಗಳ ನೃತ್ಯ ಪ್ರದರ್ಶನಗಳು ನಡೆಯಲಿವೆ. ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕರು ಮತ್ತು ಗಾಯಕರಾಗಿರುವ ಶ್ರೀಯುತ ರಘು ದೀಕ್ಷಿತ್ ಅವರ ತಂಡದ ಕಾರ್ಯಕ್ರಮ ಎಂಟು ಗಂಟೆಗೆ ಪ್ರಾರಂಭವಾಗಲಿದ್ದು, ಸಾರ್ವಜನಿಕರನ್ನು ರಂಜಿಸಲಿದೆ.

ಡಿಸೆಂಬರ್ 29ರ ಭಾನುವಾರದಂದು ಬೆಳಗ್ಗೆ 5:30ಕ್ಕೆ ಯೋಗ, 6:30ಕ್ಕೆ ಜುಂಬ (ಏರೋನಾಟಿಕ್ಸ್) ಮತ್ತು 9 ಗಂಟೆಯಿಂದ ಬೀಚ್ ಸ್ಪೋರ್ಟ್ಸ್ ಮುಂತಾದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಸಂಜೆ 5:30ಕ್ಕೆ ಆನೈನ್ ಸ್ಪರ್ಧೆ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ ಮತ್ತು ರಾತ್ರಿ 8 ಗಂಟೆಗೆ ಶೋರ್ ಬ್ಯಾಂಡ್ ಪ್ರದರ್ಶನಗಳು ನಡೆಯಲಿವೆ.

WhatsApp Image 2024 12 18 at 10.49.44 AM
ಕರಾವಳಿ ಉತ್ಸವದ ಲೋಗೋ

ಇತರೆ ವೈಶಿಷ್ಟ್ಯಗಳು:

ಜನವರಿ 4 ಮತ್ತು 5 ರಂದು ಕದ್ರಿ ಪಾರ್ಕ್ ನಲ್ಲಿ ಆಟೋಮೊಬೈಲ್ ಮತ್ತು ಶ್ರಾನ ಪ್ರದರ್ಶನ ನಡೆಯಲಿದೆ. ಜನವರಿ 11 ಮತ್ತು 12 ರಂದು ಕದ್ರಿ ಪಾರ್ಕ್ ನಲ್ಲಿ ಯುವ ಉತ್ಸವ ನಡೆಯಲಿದೆ. ಜನವರಿ 18 ಮತ್ತು 19 ರಂದು ತಣ್ಣೀರು ಬಾವಿ ಬೀಚ್‌ನಲ್ಲಿ ಸುಪ್ರಸಿದ್ದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ.

ಜಿಲ್ಲಾಡಳಿತದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವುಗಳ ಸಹಕಾರದಿಂದ ಆಕರ್ಷಕವಾಗಿ ಕರಾವಳಿ ಉತ್ಸವವನ್ನು ನಡೆಸಲು ರೂಪುರೇಷೆಗಳನ್ನು ಹಾಕಿಕೊಳ್ಳಲಾಗಿದೆ. ತುಳುನಾಡಿನ ಜನತೆ ಮತ್ತು ಪ್ರವಾಸಿಗರು ಕುಟುಂಬ ಸಹಿತ ಆಗಮಿಸಿ ಈ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸ್ಪೀಕರ್ ಯು ಟಿ ಖಾದರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X