ಸರ್ಕಾರದ ಎಲ್ಲ ಡಿಜಿಟಲ್ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನೂತನ ಕರ್ನಾಟಕ ಒನ್ ಕೇಂದ್ರವನ್ನು ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಸಹಕಾರ ಸದನದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸೋಮವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಆನ್‌ಲೈನ್ ಸೇವೆಗಳು ಕರ್ನಾಟಕ ಒನ್ ಕೇಂದ್ರದಲ್ಲಿ ಸಾರ್ವಜನಿಕರಿಗೆ ಒಂದೇ ಕಡೆ ದೊರೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಸರ್ಕಾರದ 750ಕ್ಕೂ ಅಧಿಕ ಸೇವೆಗಳು ಕರ್ನಾಟಕ ಒನ್ ಕೇಂದ್ರದಲ್ಲಿ ಲಭ್ಯವಿದೆ. ಸರ್ಕಾರದ ಸೇವೆಗಳನ್ನು ಸುಲಭವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಒನ್ ಕೇಂದ್ರಗಳು ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಕೋಲಾರ | ಪರಸ್ಪರ ಹೃದಯಗಳನ್ನು ಬೆಸೆದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮ
ಯೂನಿಟಿ ಆಸ್ಪತ್ರೆ ನಿರ್ದೇಶಕ ಡಾ.ಹಬೀಬುರ್ರಹ್ಮಾನ್, ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್ ಕುಂಞಿ, ರಫೀಕ್ ಮಾಸ್ಟರ್, ಶಾಹುಲ್ ಹಮೀದ್, ಎಸ್.ಬಿ.ದಾರಿಮಿ, ಡಾ.ಅಬ್ದುಲ್ ಮಜೀದ್, ಅಬ್ದುಲ್ ಸಲಾಂ ಉಪ್ಪಿನಂಗಡಿ, ಇರ್ಫಾನ್, ಮುಸ್ತಫಾ ಮತ್ತಿತರರು ಉಪಸ್ಥಿತರಿದ್ದರು.

