ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ ಸೇಲಿಂಗ್, ಕಯಾಕಿಂಗ್ ಮತ್ತು ಕೆನೊಯಿಂಗ್ ವಿಭಾಗಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಏಪ್ರಿಲ್ 2 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
4ನೇ ಮತ್ತು 7ನೇ ತರಗತಿಯಲ್ಲಿ ಪಾಸಾಗಿರುವ ಹಾಗೂ 2025ರ ಜೂನ್ 1ರಂದು 11 ಮತ್ತು 14 ವರ್ಷಗಳನ್ನು ಮೀರದ ಬಾಲಕರಿಗೆ ಪ್ರವೇಶಾವಕಾಶ ನೀಡಲಾಗುತ್ತದೆ. ಭಾಗವಹಿಸುವ ವಿದ್ಯಾರ್ಥಿಗಳು ಜನನ ದಿನಾಂಕವನ್ನು ದೃಢೀಕರಿಸುವ ದಾಖಲೆಯನ್ನು ತರಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 0824- 2451264 ಸಂಪರ್ಕಿಸಬಹುದು. ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
