ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಮುನ್ನ ಕೆಎಂಸಿ ಕಾಯ್ದೆಯಡಿ ಕಡ್ಡಾಯವಾಗಿ ಕಟ್ಟಡ ನಿರ್ಮಾಣ ಪರವಾನಿಗೆ ಪಡೆಯಬೇಕು. ಕಟ್ಟಡ ಪರವಾನಿಗೆ ಪಡೆದ ನಂತರ ಅನುಮೋದಿತ ನಕ್ಷೆಯನ್ವಯ ಕಟ್ಟಡ ನಿರ್ಮಿಸಿ ಕಟ್ಟಡ ಪ್ರವೇಶ ಪತ್ರ ಪಡೆದುಕೊಂಡ ನಂತರವೇ ಕಟ್ಟಡವನ್ನು ಬಳಸಲು ಅವಕಾಶ ಎಂದು ಮಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ.
ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು
ಸುಪ್ರೀಂ ಕೋರ್ಟ್ ಆದೇಶದಂತೆ ಕಟ್ಟಡ ಪ್ರವೇಶ ಪತ್ರ ಪಡೆಯದ ಕಟ್ಟಡಗಳಿಗೆ, ಸೇವಾ ಸಂಪರ್ಕಗಳಾದ ವಿದ್ಯುತ್ ಸಂಪರ್ಕ, ನೀರು ಸರಬರಾಜು, ಒಳಚರಂಡಿ ಸಂಪರ್ಕ, ಟ್ರೇಡ್ ಲೈಸೆನ್ಸ್ ಸೇರಿ ಯಾವುದೇ ರೀತಿಯ ಸೇವಾ ಸಂಪರ್ಕ ನೀಡಲು ಅವಕಾಶವಿಲ್ಲ. ನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಟ್ಟಡವನ್ನು ನಿರ್ಮಿಸುವ ಮೊದಲು ಕಡ್ಡಾಯವಾಗಿ ಕಟ್ಟಡ ಪರವಾನಿಗೆಯನ್ನು ಪಡೆದು ಅನುಮೋದಿತ ನಕ್ಷೆಯನ್ವಯ ಕಟ್ಟಡ ನಿರ್ಮಿಸಬೇಕು ಎಂದು ಸೂಚಿಸಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಹೆಬ್ಬಾವು ಮಾರಾಟ ಜಾಲ ಪತ್ತೆ; ಅಪ್ರಾಪ್ತ ಬಾಲಕ ಸೇರಿ ನಾಲ್ವರ ಬಂಧನ
ಅನಧಿಕೃತ ಕಟ್ಟಡ ನಿರ್ಮಾಣದ ವಿರುದ್ಧ ಕೆ.ಎಂ.ಸಿ ಕಾಯ್ದೆಯಡಿ ಕ್ರಮವಹಿಸಲಾಗುತ್ತದೆ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
