ಮಂಗಳೂರು | ಅಂಬೇಡ್ಕರ್ ಹಾದಿಯಲ್ಲಿ ನಡೆದರೆ ಉತ್ತಮ ಜೀವನ: ಭರತ್ ಶೆಟ್ಟಿ

Date:

Advertisements

ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದಾಗ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಅವರು ಪ್ರತಿನಿಧಿಸುತ್ತಿರುವ ವಾರ್ಡ್ 17ರ ಕೋಡಿಕಲ್ ಶಾಲೆಯ ಬಳಿ ಸುಸಜ್ಜಿತ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಶಿಕ್ಷಣದೊಂದಿಗೆ ಬಾಬಾ ಸಾಹೇಬರ ಹಾದಿಯಲ್ಲಿ ನಡೆಯಬೇಕು. ಅವರ ಹೆಸರಿನಲ್ಲಿ ನಿರ್ಮಾಣವಾದ ಈ ಭವನದಲ್ಲಿ ಶಿಕ್ಷಣ, ಉದ್ಯೋಗ, ಮತ್ತಿತರ ತರಬೇತಿಗಳು ದೊರಕಲಿ. ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಪ್ರಯೋಜನವಾಗಲಿ” ಎಂದು ಆಶಿಸಿದರು. ಭವನದ ನಿರ್ಮಾಣ ಪೂರ್ಣಗೊಳಿಸಲು ಬೇಕಾದ ಕ್ರಮ ಕೈಗೊಂಡ ಮೇಯರ್ ಮನೋಜ್ ಕುಮಾರ್ ಅವರನ್ನು ಇದೇ ವೇಳೆ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮೇಯರ್ ಮನೋಜ್ ಕುಮಾರ್, “ಈ ಸಮುದಾಯ ಭವನ ನಿರ್ಮಾಣಕ್ಕೆ ಹಲವು ಅಡ್ಡಿ ಆತಂಕ ಎದುರಾಗಿತ್ತು. ನಾನು ಪಾಲಿಕೆ ಸದಸ್ಯನಾದ ಬಳಿಕ ಪೂರ್ಣಗೊಳಿಸಲು ಮುಂದಾದೆ. ಆದರೆ ಕೊರೊನಾ ಅಡಚಣೆ ಜೊತೆಗೆ ಆರ್ಥಿಕ ಸಮಸ್ಯೆ ಎದುರಾಗಿತ್ತು. ತಾಂತ್ರಿಕ ಕಾರಣದಿಂದ ಸಮಾಜ ಕಲ್ಯಾಣ ಇಲಾಖೆಯಿಂದಲೂ ಅನುದಾನ ಸಿಗಲಿಲ್ಲ. ಕೊನೆಗೆ ಪಾಲಿಕೆ ಸಾಮಾನ್ಯ ನಿಧಿ ಹಾಗೂ ಮೀಸಲು ನಿಧಿಯಿಂದ ಹಣ ಒದಗಿಸಿ ಭವನ ಪೂರ್ಣಗೊಳಿಸಿದ್ದೇನೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೂ ಹಾಗೂ ಇತರರಿಗೂ ಈ ಸಮಾಜ ಭವನದಲ್ಲಿ ಕಡಿಮೆ ಶುಲ್ಕದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗುವುದು. ಇದರಿಂದ ಪಾಲಿಕೆಗೂ ಆದಾಯ ಬರುವಂತಾಗುತ್ತದೆ. ಸಮಾಜಮುಖಿ ಚಟುವಟಿಕೆಗೆ ಈ ಭವನ ಸದುಪಯೋಗವಾಗಲಿ” ಎಂದರು.

Advertisements

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಸುರತ್ಕಲ್‌ನ ಐಎನ್‌ಸಿಯುಬಿ8: ಪ್ರಮುಖ ಉದ್ಯಮಶೀಲತಾ ಉತ್ಸವಕ್ಕೆ ಚಾಲನೆ

ಈ ವೇಳೆ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಯಲಕ್ಷ್ಮಿ, ಕಿರಣ್ ಕುಮಾರ್ ಕೋಡಿಕಲ್, ಎಸ್ಎಸ್‌ಡಿಪಿ ಮಂದಿರದ ಸಂಚಾಲಕರಾದ ಪುರುಷೋತ್ತಮ್ ಪೂಜಾರಿ, ಮುಂಡಲ ಯುವ ವೇದಿಕೆಯ ಪ್ರದೀಪ್ ಕಾಪಿಕಾಡ್, ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿಯ ಚಂದ್ರಕುಮಾರ್, ಡಾ. ಬಿ ಆರ್ ಅಂಬೇಡ್ಕರ್ ಸೇವಾ ಸಮಿತಿಯ ಚಂದ್ರಹಾಸ್ ಮತ್ತು ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X