ಮಂಗಳೂರು | ಕೌಟುಂಬಿಕ ಕಲಹ: ಮಗುವಿನೊಂದಿಗೆ ನದಿಗೆ ಹಾರಲು ಯತ್ನಿಸಿದ ತಂದೆಯನ್ನು ರಕ್ಷಿಸಿದ ಮುಸ್ಲಿಮರು

Date:

ಪತ್ನಿಯ ವಿವಾಹೇತರ ಸಂಬಂಧಕ್ಕೆ ಬೇಸತ್ತ ಪತಿರಾಯನೊಬ್ಬ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಾಗ ಸ್ಥಳೀಯ ಮುಸ್ಲಿಮರು ಮಗುವಿನ ಸಹಿತ ಇಬ್ಬರನ್ನೂ ರಕ್ಷಿಸಿದ ಘಟನೆ ರವಿವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಸೇತುವೆಯ ಬಳಿ ನಡೆದಿದೆ.

- Advertisement -

ಕಂದಾವರ ಪಡ್ಡಾಯಿ ಪದವಿನ ಸಂದೀಪ್ (34) ಎಂಬಾತ 2 ವರ್ಷದ ಮಗುವನ್ನು ಹಿಡಿದುಕೊಂಡು ಸೇತುವೆ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಳ್ಳುತ್ತಿದ್ದ. ಈ ವೇಳೆ ಸ್ಥಳೀಯರು ಕೆಳಗೆ ಹಾರಬೇಡ ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ವೇಳೆ ಆತ, ‘ಯಾರೂ ಹತ್ತಿರ ಬರಬೇಡಿ’ ಎಂದು ಕೂಗಿಕೊಂಡಿದ್ದಾನೆ.‌‌ ಇದೇ ವೇಳೆ ಆಯತಪ್ಪಿ ರಸ್ತೆಯ ಬದಿಗೆ ಬಿದ್ದಾಗಲೇ, ಓಡೋಡಿ ಬಂದ ಸ್ಥಳೀಯರು, ಕೊನೆಗೂ ಇಬ್ಬರನ್ನೂ ಹಿಡಿದು ಮಗುವಿನ ರಕ್ಷಣೆ ಮಾಡಿದ್ದಾರೆ.

“ಪತ್ನಿಯು ತನ್ನ ಕಣ್ಣೆದುರೇ ವಿವಾಹೇತರ ಸಂಬಂಧ ಹೊಂದಿದ್ದನ್ನು ನೋಡಿದ್ದೇನೆ. ಇದನ್ನು ಪ್ರಶ್ನಿಸಿದಾಗ ನನ್ನ ಮೇಲೆಯೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾಳೆ.‌ ಇದರಿಂದಾಗಿ ತುಂಬಾ ಮನನೊಂದು ಈ ನಿರ್ಧಾರಕ್ಕೆ ಬಂದಿದ್ದೆ” ಎಂದು ಸ್ಥಳೀಯರು ರಕ್ಷಣೆ ಮಾಡಿದ ಬಳಿಕ ಸಂದೀಪ್ ಹೇಳಿಕೆಯನ್ನು ನೀಡಿದ್ದಾನೆ‌. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆಗೆ ಮುಂದಾಗಿದ್ದ ಎಂದು ಸದ್ಯ ತಿಳಿದು ಬಂದಿದೆ. ಸ್ಥಳೀಯರು ಬುದ್ದಿ ಮಾತು ಹೇಳಿ ಮನೆಗೆ ಕಳುಹಿಸಿದ್ದಾರೆ. ಘಟನೆಯ ದೃಶ್ಯಾವಳಿಗಳ ವಿಡಿಯೋ ಸೆರೆಯಾಗಿದೆ.

ನಿರಂತರ ಜಗಳ ನಡೆಯುತ್ತಿದ್ದ ಕಾರಣದಿಂದ ಸಂದೀಪ್ ವಿರುದ್ಧ ಪತ್ನಿ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

ಮಗು ಹಾಗೂ ತಂದೆಯನ್ನು ರಕ್ಷಿಸಿದ ಸ್ಥಳೀಯ ಮುಸ್ಲಿಮರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾಗಳಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...