ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳ ಸಂಘದ ಸಹಕಾರದೊಂದಿಗೆ ಇದೇ ಫೆಬ್ರವರಿ 1 ರಂದು ಬೆಳಗ್ಗೆ 10:30 ಗಂಟೆಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಉರ್ವಸ್ಟೋರ್ ತುಳುಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಘು ಇಡ್ಕಿದು, ಮಡಿವಾಳ ಮಾಚಿದೇವ ಜಯಂತಿಯ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಮಂಗಳೂರು | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾಧ್ಯಕ್ಷರಾಗಿ ಎಂ. ದಿವಾಕರ್ ರಾವ್ ಬೋಳೂರು ಆಯ್ಕೆ
