ಮಂಗಳೂರು | ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ: ಅರಣ್ಯಾಧಿಕಾರಿ ರಾಜೇಶ್

Date:


ಗಿಡಗಳ ಸಂರಕ್ಷಣೆಯ ಕುರಿತು ಸಾಮೂಹಿಕ ಜಾಗೃತಿ ಅಗತ್ಯವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ಬಿ ತಿಳಿಸಿದರು.

- Advertisement -

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸುರತ್ಕಲ್ ಕೋಡಿಕೆರೆ (ಎಸ್ ಟಿ ಪಿ )ಯಲ್ಲಿ ವನಮಹೋತ್ಸವ ಹಾಗೂ 50 ಗಿಡಗಳನ್ನು ನೆಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಜಾಗತಿಕ ತಾಪಮಾನ ಏರಿಕೆ, ಹವಾಮಾನದ ವೈಪರೀತ್ಯಗಳು ಸೇರಿದಂತೆ ಪರಿಸರದಲ್ಲಿನ ಸವಾಲುಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಸಮಾಜದಲ್ಲಿ ಸಾಮಾಜಿಕವಾಗಿ ಜಾಗೃತಿ ಮೂಡಿಸಬೇಕಾಗಿದೆ. ಮಂಗಳೂರು ನಗರದಲ್ಲಿ 25 ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಮತ್ತು ಈ ಗಿಡಗಳನ್ನು ನೆಟ್ಟು ಸಂರಕ್ಷಣೆಯ ನಿಗಾವಹಿಸುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈಗಾಗಲೇ ಸುಮಾರು 9000 ಗಿಡಗಳನ್ನು ಅರಣ್ಯ ಇಲಾಖೆ ಯವತಿಯಿಂದ ನೆಡಲಾಗಿದೆ. ಈ ನಿಟ್ಟಿನಲ್ಲಿ ಸಾಮೂಹಿಕ ಸಹಭಾಗಿತ್ವದ ಅಗತ್ಯವಿದೆ” ಎಂದರು.

ಇದನ್ನೂ ಓದಿ: ಮಂಗಳೂರು | ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಸಮಾರಂಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಸುರತ್ಕಲ್ ಅರಣ್ಯವಲಯದ ಉಪ ಅರಣ್ಯಾಧಿಕಾರಿ ಶ್ರವಣ್ ಕುಮಾರ್, ಸುರತ್ಕಲ್ ಬೀಟ್ ಅರಣ್ಯ ಅಧಿಕಾರಿ ಗಂಗಾಧರ್, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟಾ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಕೋಡಿಕೆರೆ ಎಸ್ ಟಿ ಪಿ ಗುತ್ತಿಗೆದಾರ ಶಾಂತರಾಜು ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...