ಮಂಗಳೂರು | ವೆನ್ಲಾಕ್ ಆಸ್ಪತ್ರೆಯ ಕಾರುಣ್ಯ ಯೋಜನೆಗೆ ನೆರವು ನೀಡಿದ ಉದ್ಯಮಿ ರೊನಾಲ್ಡ್ ಮಾರ್ಟಿಸ್

Date:

ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬಾಯಿಯ ಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಹೇಳಿದರು.

- Advertisement -

ಮಂಗಳೂರು ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಫಿಸಿಯೋಥೆರಪಿ ಸೆಂಟರ್ ಬಳಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇಲ್ಲಿ ನಿರಂತರ ಎಂಟು ವರ್ಷಗಳಿಂದ ಊಟ ನೀಡುತ್ತಿರುವುದು ಮತ್ತು ಲೇಡಿಗೋಷನ್ ಆಸ್ಪತ್ರೆಗೂ ವಿಸ್ತರಿಸಿರುವುದು ಸಣ್ಣ ವಿಷಯವಲ್ಲ. ಇದು ಇಡೀ ರಾಜ್ಯಕ್ಕೆ ವಿಸ್ತರಿಸುವಂತಾಗಲಿ. ರೋಗಿಗಳಿಗೆ ಬಟ್ಟೆಯ ವ್ಯವಸ್ಥೆ ಕೂಡಾ ಮಾಡಿರುವುದು ದೇವರು ಮೆಚ್ಚುವ ಕೆಲಸ. ಇದಕ್ಕೆ ದೇವರು ದುಪ್ಪಟ್ಟು ಪ್ರತಿಫಲ ಕೊಡುತ್ತಾನೆ. ನಾನು ಎರಡು ವರ್ಷದಿಂದ ಎಂಫ್ರೆಂಡ್ಸ್ ಜತೆಗಿದ್ದು, ಮುಂದೆಯೂ ಇರುತ್ತೇನೆ ಎಂದು ಅವರು ಹೇಳಿದರು.

ಎಂಫ್ರೆಂಡ್ಸ್ ಟ್ರಸ್ಟ್‌ನ ಅಧ್ಯಕ್ಷರಾದ ಝಕರಿಯಾ ಜೋಕಟ್ಟೆ ಅಧ್ಯಕ್ಷತೆ ವಹಿಸಿ, ರೊನಾಲ್ಡ್ ಮಾರ್ಟಿಸ್ ಅವರನ್ನು ಗೌರವಿಸಿ, ದಾನ ಮಾಡಿದವರು ಎಂದೂ ಸೋತಿಲ್ಲ. ಯಾರೂ ಆಸ್ಪತ್ರೆಗೆ ಬರುವ ಪರಿಸ್ಥಿತಿ ಬರಬಾರದು. ಬಂದವರು ಶೀಘ್ರ ಗುಣಮುಖರಾಗಿ ಹೋಗಬೇಕು. ಹಸಿದವರಿಗೆ ಊಟ ನೀಡುವ ಯೋಜನೆಗೆ ಎಲ್ಲರ ಸಹಕಾರ ಅಗತ್ಯ ಎಂದರು.

ಎಂಫ್ರೆಂಡ್ಸ್‌ನ ಅನಿವಾಸಿ ಭಾರತೀಯ ಟ್ರಸ್ಟಿಗಳಾದ ಅಬ್ದುಲ್ಲಾ ಮೋನು ಕತಾರ್, ಅಶ್ರಫ್ ಅಬ್ಬಾಸ್, ಅಮೀರ್ ಅಬ್ಬಾಸ್, ಹಾರಿಸ್ ಕಾನತ್ತಡ್ಕ, ಮುಹಮ್ಮದ್ ಕುಕ್ಕುವಳ್ಳಿ, ದುಬಾಯಿಯ ಉದ್ಯಮಿ ಹಾಫಿಝ್ ಅಹ್ಮದ್ ಸಾಬಿತ್ ಇನ್‌ಸ್ಪೈರ್ ಉಪಸ್ಥಿತರಿದ್ದರು.

ಎಂಫ್ರೆಂಡ್ಸ್ ಕಾರ್ಯಾಧ್ಯಕ್ಷ ಸುಜಾಹ್ ಮೊಹಮ್ಮದ್ ಸ್ವಾಗತಿಸಿದರು. ಸ್ಥಾಪಕ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಕಾರುಣ್ಯ ಯೋಜನೆ ಮುಖ್ಯಸ್ಥ ಮೊಹಮ್ಮದ್ ಹನೀಫ್ ಗೋಳ್ತಮಜಲು ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...