ಮಂಗಳೂರು | ಚೆಂಬುಗುಡ್ಡೆ ರಸ್ತೆ ಅವ್ಯವಸ್ಥೆ: ಗುಂಡಿ ಮುಚ್ಚಲು ಮಹಿಳೆಯ ಜೀವವೇ ಹೋಗಬೇಕಾಯಿತು!

Date:

Advertisements

ಕೆಲವೊಂದು ಸಮಸ್ಯೆಗಳನ್ನು ಪರಿಹರಿಸಲು ಎಷ್ಟೇ ಗೋಗರೆದರೂ ಕೂಡ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸುವುದೇ ಇಲ್ಲ. ಸಂಬಂಧಪಟ್ಟವರು ಸ್ಪಂದನೆ ನೀಡಬೇಕು ಎಂದಾದರೆ ಏನಾದರೊಂದು ಅವಘಡ ಸಂಭವಿಸಬೇಕು ಅಥವಾ ಜನರೇ ಸ್ವಯಂಪ್ರೇರಿತವಾಗಿ ಬೀದಿಗಳಿಯಬೇಕಾದಂತಹ ಪರಿಸ್ಥಿತಿ ಬರಬೇಕು.

ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಕೂಡ ಇದೇ ಆಗಿದೆ.

ಹೌದು. ಒಂದು ರಸ್ತೆ ಗುಂಡಿಯನ್ನು ಮುಚ್ಚಿ ಎಂದು ಆಗ್ರಹಿಸಿ ಕಳೆದ ಹಲವಾರು ವರ್ಷಗಳಿಂದ ಜನರು ಸತತವಾಗಿ ಶಾಸಕ ಯು ಟಿ ಖಾದರ್, ಉಳ್ಳಾಲ ನಗರಸಭೆಯ ಅಧಿಕಾರಿಗಳನ್ನು ಮನವಿ ಮಾಡಿಕೊಂಡಿದ್ದಾರಾದರೂ ತೊಕ್ಕೊಟ್ಟು ಪೇಟೆ ಸಮೀಪದ ಚೆಂಬುಗುಡ್ಡೆಯಲ್ಲಿನ ರಸ್ತೆಯ ಅವ್ಯವಸ್ಥೆ ಸರಿಯಾಗಿರಲಿಲ್ಲ. ಶನಿವಾರ ಸಂಜೆ ತನ್ನ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ಅಪಘಾತ ಸಂಭವಿಸಿ, ಮಹಿಳೆಯೋರ್ವರು ಮೃತಪಟ್ಟಿದ್ದರು.

Advertisements

ಸ್ಕೂಟರ್ ಚೆಂಬುಗುಡ್ಡೆಯ ರಸ್ತೆ ಗುಂಡಿಯ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಿದ್ದ ವೇಳೆ ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಚೆಂಬುಗುಡ್ಡೆ ಬಳಿ ಶನಿವಾರ ಸಂಜೆ ನಡೆದಿತ್ತು‌.

mangalore chombugudde

ಮೃತ ಮಹಿಳೆಯನ್ನು ಮೂಲತಃ ಕುಳಾಯಿಯ ಪ್ರಸಕ್ತ ದೇರಳಕಟ್ಟೆಯಲ್ಲಿ ವಾಸವಾಗಿದ್ದ ರಹಮತ್ (47) ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ರಹಮತ್ ಅವರ ಪತಿ ಅಬ್ದುಲ್ ರಶೀದ್ ಜಿ. ಅವರಿಗೂ ಗಾಯವಾಗಿದೆ.

ಪತಿ ರಶೀದ್ ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ವಿಭಾಗದ ಸಿಬ್ಬಂದಿಯಾಗಿದ್ದು, ಶನಿವಾರ ಸಂಜೆ ಸುಮಾರು 4:30ಕ್ಕೆ ತನ್ನ ಸ್ಕೂಟರ್‌ನಲ್ಲಿ ತನ್ನ ಪತ್ನಿ ರಹಮತ್ ಅವರನ್ನು ಕುಳ್ಳಿರಿಸಿ ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ತೊಕ್ಕೊಟ್ಟು-ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಹದಗೆಟ್ಟ ರಸ್ತೆಯ ಗುಂಡಿಯಿಂದ ಪಾರಾಗಲು ರಶೀದ್ ಹರಸಾಹಸ ಪಡುತ್ತಿದ್ದಂತೆಯೇ ನಿಯಂತ್ರಣ ಕಳಕೊಂಡು ಸ್ಕೂಟರ್ ಸ್ಕಿಡ್ಡಾಗಿ ಬಿತ್ತು. ಇದರಿಂದ ಸ್ಕೂಟರ್ ಹಿಂಬದಿ ಕುಳಿತಿದ್ದ ರಹಮತ್ ರಸ್ತೆಗೆ ಎಸೆಯಲಟ್ಟರು. ಈ ವೇಳೆ ಆದೇ ರಸ್ತೆಯಲ್ಲಿ ಅಮಿತ ವೇಗದಲ್ಲಿದ್ದ ಟ್ಯಾಂಕರ್ ರಹ್ಮತ್‌ರ ಮೇಲೆಯೇ ಹರಿದಿದ್ದರಿಂದ ಮೃತಪಟ್ಟ ಘಟನೆ ನಡೆದಿತ್ತು.

ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಹದಗೆಟ್ಟ ರಸ್ತೆಯನ್ನು ದುರಸ್ತಿಪಡಿಸಬೇಕು ಎಂದು ಆಗ್ರಹಿಸಿ ಕೆಲಕಾಲ ಪ್ರತಿಭಟನೆ ಕೂಡ ನಡೆಸಿದರು.

ಶನಿವಾರ ತಡರಾತ್ರಿ ಡಿವೈಎಫ್‌ಐ ಕಾರ್ಯಕರ್ತರು ಕೂಡ ಶಾಸಕ ಯು ಟಿ ಖಾದರ್ ವಿರುದ್ಧ ಪ್ರತಿಭಟನೆ ನಡೆಸಿದರು. ಜನರ ಆಕ್ರೋಶದ ಬೆಂಕಿಯನ್ನು ಅರಿತ ಶಾಸಕ ಯು ಟಿ ಖಾದರ್, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ನಿರ್ದೇಶನ ನೀಡಿ, ಕೂಡಲೇ ರಸ್ತೆಯನ್ನು ಸರಿಪಡಿಸಲು ಸೂಚನೆ ನೀಡಿದ್ದಾರೆ.

IMG 20241110 WA0063

ಶಾಸಕರ ಕರೆ ಬರುತ್ತಿದ್ದಂತೆಯೇ ಎಚ್ಚರಗೊಂಡ ಸಂಬಂಧಪಟ್ಟ ಅಧಿಕಾರಿಗಳು, ಶನಿವಾರ ರಾತ್ರಿಯೇ ಜಲ್ಲಿಕಲ್ಲು, ಸಿಮೆಂಟ್ ಮಿಶ್ರಿತ ಕಾಂಕ್ರೀಟ್ ಅನ್ನು ಚೆಂಬುಗುಡ್ಡೆಯ ರಸ್ತೆಗೆ ಸುರಿದು, ಗುಂಡಿಯನ್ನು ಮುಚ್ಚುವ ಮೂಲಕ ತಾತ್ಕಾಲಿಕ ಪರಿಹಾರ ಕಲ್ಪಿಸಿದ್ದಾರೆ. ಆ ಮೂಲಕ ಜನಾಕ್ರೋಶ ಇನ್ನಷ್ಟು ಹೆಚ್ಚಾಗದಂತೆ ತಡೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಈ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸ್ಪೀಕರ್ ಯು.ಟಿ.ಖಾದರ್‌ಗೆ ಈ ರಸ್ತೆಯ ಬಗ್ಗೆ ಸಂಪೂರ್ಣ ಅರಿವು ಇದೆ. ಆದರೆ ಅವರು ಇದರ ದುರಸ್ತಿಗೆ ಆದ್ಯತೆ ನೀಡಿಲ್ಲ. ಅಧಿಕಾರಿ ಗಳು ಕೂಡ ಇದರತ್ತ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ನಂತರ, ತಾತ್ಕಾಲಿಕ ಪರಿಹಾರವನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ.

IMG 20241110 WA0072

“ಆದಷ್ಟು ಶೀಘ್ರವಾಗಿ ದೇರಳಕಟ್ಟೆ-ನಾಟೆಕಲ್ ಪರಿಸರದಲ್ಲಿರುವ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ನಮಗೆ ತಾತ್ಕಾಲಿಕ ಪರಿಹಾರ ಬೇಡ. ರಸ್ತೆ ಗುಂಡಿಗಳಿಗೆ ಶಾಸಕ ಯು ಟಿ ಖಾದರ್ ಶಾಶ್ವತ ಪರಿಹಾರ ಕಲ್ಪಿಸಬೇಕು. ಜೊತೆಗೆ ಶನಿವಾರ ನಡೆದ ಅಪಘಾತದಲ್ಲಿ ಮೃತರಾದ ಮಹಿಳೆಯ ಕುಟುಂಬವನ್ನು ಶಾಸಕರು ಭೇಟಿ ಮಾಡಿ, ಸಾಂತ್ವನ ಹೇಳುವುದರ ಜೊತೆಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು. ‌ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು” ಎಂದು ಈ ದಿನ.ಕಾಮ್ ಜೊತೆಗೆ ಮಾತನಾಡಿದ ಡಿವೈಎಫ್‌ಐ ಉಳ್ಳಾಲ ತಾಲೂಕು ಘಟಕದ ಕಾರ್ಯದರ್ಶಿ ರಿಝ್ವಾನ್ ಹರೇಕಳ ಆಗ್ರಹಿಸಿದ್ದಾರೆ.

1002304632
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X