ಮಂಗಳೂರು ಗುಂಪು ಹತ್ಯೆ ಪ್ರಕರಣ: ಸಿಒಡಿ ತನಿಖೆಗೆ ಇನಾಯತ್ ಅಲಿ ಆಗ್ರಹ

Date:

Advertisements

ಮಂಗಳೂರು ನಗರ ಹೊರವಲಯದ ಕುಡುಪುವಿನಲ್ಲಿ ನಡೆದ ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಪ್ರಕರಣವನ್ನು ಸಿಒಡಿ(ಸಿಐಡಿ) ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಅವರು, “”ಮೃತದೇಹದ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗಳು ಉಂಟಾಗಿರುವುದು ಕಂಡುಬಂದರೂ ಸಹ ಪೊಲೀಸ್ ಇಲಾಖೆ ಕೂಡಲೇ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳದೆ ಪ್ರಕರಣವನ್ನು ಯುಡಿಆರ್ ಪ್ರಕರಣವೆಂದು ದಾಖಲಿಸಿಕೊಂಡಿರುತ್ತಾರೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅನುಮಾನ ಮತ್ತು ಆಕ್ರೋಶ ವ್ಯಕ್ತವಾದ ನಂತರ ಕೊಲೆ ಪ್ರಕರಣ ಎಂದು ದಾಖಲಿಸಲಾಗಿದೆ” ಎಂದು ದೂರಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಘಟನೆ | ‘ಪಾಕಿಸ್ತಾನ್ ಜಿಂದಾಬಾದ್’ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳದ್ದು: ಗೃಹ ಸಚಿವ ಪರಮೇಶ್ವರ್

Advertisements

ಇಪ್ಪತ್ತನಾಲ್ಕು ಗಂಟೆ ಕಳೆದ ನಂತರವೇ ಇಂತಹ ಗಂಭೀರ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಇನಾಯತ್ ಅಲಿ, “ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಒಡಿ(ಸಿಐಡಿ) ತನಿಖೆ ನಡೆಸಿ, ನೈಜ ಆರೋಪಿಗಳನ್ನು ಪತ್ತೆ ಹಚ್ಚುವಂತೆ” ತಮ್ಮ ಪತ್ರದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X