ಮಂಗಳೂರು | ದಿನನಿತ್ಯದ ಬದುಕಿನಲ್ಲಿ ಚಂದ್ರನ ಪಾತ್ರ ಬಹುದೊಡ್ಡದು: ಅತುಲ್ ಭಟ್

Date:

Advertisements

ಚಂದ್ರನ ಅನ್ವೇಷಣೆಯಲ್ಲಿ ಮನುಕುಲವು ಸಾಧಿಸಿದ ಪ್ರಮುಖ ಮೈಲಿಗಲ್ಲುಗಳನ್ನು ಮನವರಿಕೆ ಮಾಡುವುದರ ಜತೆಗೆ ಜನರ ದಿನನಿತ್ಯದ ಬದುಕಿನಲ್ಲಿ ಚಂದ್ರನ ಪ್ರಭಾವ ಬೀರುವ ಅಂಶಗಳು ಹಾಗೂ ಉಪಯೋಗಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ಮಣಿಪಾಲ ಮಾಹೆಯ ಸಂಶೋಧನಾ ಸ್ಕಾಲರ್ ಅತುಲ್ ಭಟ್ ಹೇಳಿದರು.

ಮಂಗಳೂರು ನಗರದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ಕೇಂದ್ರವು ಹಲವು ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಸಾಕ್ಷಿಯಾಗುತ್ತಿದ್ದು, ಇದರ ಸಂಪೂರ್ಣ ಸದುಪಯೋಗವನ್ನು ನಿರಂತರವಾಗಿ ಪಡೆದುಕೊಳ್ಳಬೇಕೆಂದು ತಿಳಿಸಿದರು. ನಂತರ ಚಂದ್ರನ ವಿವಿಧ ಆಯಾಮಗಳು, ಚಂದ್ರನ ಭ್ರಮಣೆ ಮತ್ತು ಪರಿಭ್ರಮಣೆಯ ಅವಧಿಗಳು ಮತ್ತು ಕುಳಿಗಳ ಬಗ್ಗೆ ಸಂರ್ಪೂಣವಾದ ಮಾಹಿತಿಯನ್ನು ಭಾಗವಹಿಸಿದ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

Advertisements

ವಿಶೇಷವಾದ ಕಿಟ್‍ಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿತೆಗಳ ಮುಖಾಂತರ ಚಂದ್ರನ ವಿವಿಧ ಆಯಾಮಗಳನ್ನು ಪ್ರಾಯೋಗಿಕವಾಗಿ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಭಟ್ ಹಾಗೂ ತಂಡದವರು ನಡೆಸಿಕೊಟ್ಟರು. ತಾರಾಲಯದಲ್ಲಿ ‘ದಿ ಮೂನ್ʼ ಎಂಬ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು.

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಅರುಣ್ ಕುಮಾರ್ ಎನ್. ಮಾತನಾಡಿ, ಇಂತಹ ಕಾರ್ಯಕ್ರಮಗಳು ನಾವು ಚಂದ್ರನ ಮೇಲೆ ಮಾಡಿದ ಅನ್ವೇಷಣೆಗಳನ್ನು ಮೆಲುಕು ಹಾಕುವುದರ ಜತೆಗೆ ಮುಂದೆ ಕೈಗೊಳ್ಳಬಹುದಾದ ಸಂಶೋಧನೆಗಳಿಗೆ ಪ್ರೇರಣೆಯಾಗಲಿವೆ ಎಂದರು. ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ ಅಶೋಕ್ ಕೆ.ಆರ್ ಮಾತನಾಡಿ, ಪಿಲಿಕುಳವು ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಇದನ್ನೂ ಓದಿ: ಮಂಗಳೂರು | ಜು.23ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ಕಾರ್ಯಕ್ರಮದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕಿ  ಡಾ. ಶಕೀಲಾ ಹಾಗೂ ಯೆನೆಪೋಯ ಇನ್ಸಿಟ್ಯೂಟ್ ಆಫ್ ಆಟ್ರ್ಸ್, ಸೈನ್ಸ್, ಕಾಮರ್ಸ್ ಆಂಡ್ ಮ್ಯಾನೇಜ್‍ಮೆಂಟ್‍ನ ಸಹ ಪ್ರಾಧ್ಯಾಪಕಿ ಕೆ. ಮಾಯಾ ಕುಡ್ವ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X