ಮಂಗಳೂರು | ಏ.12ರಂದು ನಡೆಯಲಿರುವ ಮೂಳೂರು- ಅಡ್ಡೂರು ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

Date:

Advertisements

ಮಂಗಳೂರು ತಾಲೂಕಿನ ಗುರುಪುರದ ಮಾಣಿಬೆಟ್ಟುಗುತ್ತಿನ ಎದುರು ಗದ್ದೆಯಲ್ಲಿ ಏಪ್ರಿಲ್ 12ರಂದು ನಡೆಯಲಿರುವ ದ್ವಿತೀಯ ವರ್ಷದ ಮೂಳೂರು- ಅಡ್ಡೂರು ಜೋಡುಕರೆ ಕಂಬಳೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ದ.ಕ. ಜಿಲ್ಲೆಯ ಕೊನೆಯ ಹೊನಲು ಬೆಳಕಿನ ಕಂಬಳವನ್ನು ವಿಶಿಷ್ಟವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದ್ದಾರೆ.

ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 8.30ಕ್ಕೆ ಕಂಬಳದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ನೆರವೇರಿಸುವರು. ಸರ್ವಧರ್ಮ ಗುರುಗಳ ಉಪಸ್ಥಿತಿಯಲ್ಲಿ ನಡೆಯಲಿರುವ ಕಂಬಳದಲ್ಲಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ, ಗುರುಪುರ ಪೊಂಪೈ ಚರ್ಚ್‌ ಧರ್ಮಗುರು ವಂ. ರೊಡಾಲ್ಫ್ ರವಿ ಡೇಸಾ, ಕೈಕಂಬ ಅಸ್ರಾರುದ್ದೀನ್ ಮಸೀದಿಯ ಧಾರ್ಮಿಕ ಗುರು ಅಬ್ದುಲ್ ಕಬೀರ್ ದಾರಿಮಿ ಭಾಗವಹಿಸಲಿದ್ದಾರೆ ಎಂದರು.

ಜರ್ಮನ್ ತಂತ್ರಜ್ಞಾನದ ಟೆಂಟ್

Advertisements

ಹಲವು ವಿಶೇಷತೆಗಳೊಂದಿಗೆ ನಡೆಯಲಿರುವ ಕಂಬಳದಲ್ಲಿ ಜರ್ಮನ್ ತಂತ್ರಜ್ಞಾನದ ಟೆಂಟ್ ಅಳವಡಿಸಿ ಡಿಜಿಟಲ್ ವೇದಿಕೆಯನ್ನು ರಚಿಸಲಾಗುತ್ತಿದೆ. ಕಂಬಳದ ಜತೆ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ‘ಯಕ್ಷ ವಸುಂಧರ’ ಎಂಬ ಯಥೋತ್ಸವ ಬೆಳಗ್ಗೆ 10ರಿಂದ ಆರಂಭಗೊಳ್ಳಲಿದೆ. ಹಿರಿಯ ಹಿಮ್ಮೇಳ ವಾದಕ ಹಾಗೂ ಯಕ್ಷ ಗುರು ದಿ. ಜಿ.ಟಿ. ಅಣ್ಣು ಭಟ್ ಅವರ ಸ್ಮರಣಾರ್ಥ ಹಿರಿಯರ ನೆನಪು ಕಾರ್ಯಕ್ರಮ, ತೆಂಕುತಿಟ್ಟು ಯಕ್ಷಗಾನ ಸ್ಥಿತ್ಯಂತರಗಳು ವಿಷಯದಲ್ಲಿ ವಿಚಾರಗೋಷ್ಠಿ, ತಾಳಮದ್ದಳೆ ಹಾಗೂ ಅಹೋರಾತ್ರಿ ಯಕ್ಷಗಾನವನ್ನು ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿಯ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್ ವಿವರಿಸಿದರು.

WhatsApp Image 2025 04 10 at 7.45.07 PM

69 ಪದಕ ವೀರ ದೂಜನಿಗೆ ಸನ್ಮಾನ, ಅಂಚೆ ಚೀಟಿ ಬಿಡುಗಡೆ

ದ.ಕ. ಜಿಲ್ಲೆಯಲ್ಲಿ ಈ ಋತುಮಾನದ ಕೊನೆಯ ಕಂಬಳ ಇದಾಗಿದ್ದು, ಸಂಜೆ 6.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು. ವಿಧಾನಸಭಾ ಸ್ಪೀಕ‌ರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿರುವರು. 200ಕ್ಕೂ ಅಧಿಕ ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಇನಾಯತ್ ಅಲಿ ಮಾಹಿತಿ ನೀಡಿದರು.

ಕಂಬಳ ಕ್ಷೇತ್ರದಲ್ಲಿ ತನ್ನ ಓಟದ ಸಾಮರ್ಥ್ಯದಿಂದ ಛಾಪು ಮೂಡಿಸಿರುವ, 69 ಪದಕ ವಿಜೇತ ದೂಜ ಕೋಣನಿಗೆ ಸನ್ಮಾನ ಹಾಗೂ ಅಂಚೆ ಇಲಾಖೆಯಿಂದ ದೂಜ ಕುರಿತ ಅಂಚೆ ಚೀಟಿ ಬಿಡುಗಡೆ ನಡೆಯಲಿದೆ. ಭಾಗವಹಿಸುವ ಪ್ರತಿ ಕೋಣಗಳಿಗೆ ಬೆಳ್ಳಿಯ ನಾಣ್ಯ ನೀಡಲಾಗುವುದು. ಕಂಬಳವು ಜಾತಿ, ಮತ ಧರ್ಮದ ಬೇಧವಿಲ್ಲದೆ ನಡೆಯುತ್ತಿದ್ದು, ಹಲವು ಸೆಲೆಬ್ರಿಟಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದರು.

ಇದನ್ನು ಓದಿದ್ದೀರಾ? ‘ಮಂಗಳೂರು ಹಜ್‌ ಭವನ’ಕ್ಕಾಗಿ 8 ಕೋಟಿ ಮೌಲ್ಯದ 1.8 ಎಕರೆ ಜಮೀನು ದಾನ ಮಾಡಿದ ಇನಾಯತ್ ಅಲಿ

ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿಯ ಸ್ಥಾಪಕ ಅಧ್ಯಕ್ಷ ರಾಜ್ ಕುಮಾರ್ ಶೆಟ್ಟಿ, ಮುಂಬೈ ಸಮಿತಿಯ ಅಧ್ಯಕ್ಷ ಸತೀಶ್‌ ಶೆಟ್ಟಿ, ಸಮಿತಿಯ ಪದಾಧಿಕಾರಿಗಳಾದ ಸುರೇಂದ್ರ ಕಂಬಳಿ, ಮೆಲ್ವಿನ್, ಯಶವಂತ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ, ವಿನಯ್ ಶೆಟ್ಟಿ, ಜಯಶೀಲ ಅಡ್ಯಂತಾಯ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X