ಮಂಗಳೂರು | ಮುಮ್ತಾಝ್ ಅಲಿ ಬ್ಲ್ಯಾಕ್‌ಮೇಲ್ ಪ್ರಕರಣ : ಸಮಗ್ರ ತನಿಖೆಗೆ ಹೋರಾಟ ಸಮಿತಿ ಆಗ್ರಹ

Date:

ಮಂಗಳೂರಿನ ಪ್ರಸಿದ್ಧ ಉದ್ಯಮಿ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಮುಮ್ತಾಝ್ ಅಲಿ ಆತ್ಮಹತ್ಯೆ ಪ್ರಕರಣ ಸಮಾಜದಲ್ಲಿ ತಲ್ಲಣ ಮೂಡಿಸಿದೆ. ಹನಿಟ್ರ್ಯಾಪ್, ಬ್ಲ್ಯಾಕ್‌ಮೇಲ್‌ನಿಂದ ಕಂಗೆಟ್ಟು ಈ ಆತ್ಮಹತ್ಯೆ ಸಂಭವಿಸಿದೆ. ಪ್ರಕರಣದಲ್ಲಿ ಇನ್ನಷ್ಟು ನಿಗೂಢ ಅಂಶಗಳು, ಭಾಗೀದಾರಿಕೆಯ ಶಂಕೆ ಇದೆ. ಹಾಗಾಗಿ, ಆಳವಾದ ತನಿಖೆಯ ಅಗತ್ಯವಿದೆ ಎಂದು ಸುರತ್ಕಲ್ ನಾಗರಿಕ ಹೋರಾಟ ಸಮಿತಿ ಆಗ್ರಹಿಸಿದೆ.

- Advertisement -

ಈ ಬಗ್ಗೆ ಹೇಳಿಕೆ ನೀಡಿರುವ ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಈ ಪ್ರಕರಣ ಮಾತ್ರವಲ್ಲದೆ ಇನ್ನಷ್ಟು ಹನಿಟ್ರ್ಯಾಪ್, ಬ್ಲ್ಯಾಕ್‌ಮೇಲ್ ಪ್ರಕರಣಗಳು ಮಂಗಳೂರಿನ ಪ್ರತಿಷ್ಠಿತರು, ಉದ್ಯಮಿಗಳನ್ನು ಗುರಿಯಾಗಿಸಿ ನಡೆದಿರುವ ಸುದ್ದಿಗಳು ಹರಿದಾಡುತ್ತಿವೆ. ಸದ್ದಿಲ್ಲದೆ ಮುಗಿದು ಹೋಗಿರುವ ಇಂತಹ ಪ್ರಕರಣಗಳಲ್ಲಿ ಹಲವು ಕುಟುಂಬಗಳು ಛಿದ್ರವಾಗಿವೆ ಎಂಬ ಮಾತುಗಳಿವೆ. ಈ ಎಲ್ಲಾ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಷ್ಟಿತ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ, ಬ್ಲ್ಯಾಕ್‌ಮೇಲ್‌ ಪ್ರಕರಣವನ್ನು ಆಳವಾದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಹಿಳೆಯನ್ನು ಬಳಸಿಕೊಂಡು ಹಣ ಹಾಗೂ ವೈಯಕ್ತಿಕ ದ್ವೇಷ ಸಾಧನೆ ಸಹಿತ ವಿವಿಧ ಉದ್ದೇಶ ಸಾಧನೆಗಾಗಿ ಮುಮ್ತಾಝ್ ಅಲಿಯವರನ್ನು ಹಾಗೂ ಕುಟುಂಬವನ್ನು ಗುರಿಯಾಗಿಸಿ ಪರಿಚಿತ ತಂಡ ಬ್ಲ್ಯಾಕ್‌ಮೇಲ್‌ ಮಾಡಿದೆ. ಅಸಾಧ್ಯ ಕಿರುಕುಳ ಕೂಡ ನೀಡಿದೆ. ಇದರಿಂದ ಉಂಟಾದ ಒತ್ತಡವನ್ನು ಭರಿಸಲಾಗದೆ ಮುಮ್ತಾಝ್ ಅಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ.

ಬೆದರಿಕೆ, ಮಾನಸಿಕ ಕಿರುಕುಳ, ಪ್ರತಿಷ್ಠೆಗೆ ಕಳಂಕ ಹಚ್ಚುವ ಯತ್ನ, ಬ್ಲ್ಯಾಕ್‌ಮೇಲ್‌, ಸತತವಾಗಿ ಹಣ ಸುಲಿಗೆ… ಹೀಗೆ ಹಲವು ತಿಂಗಳುಗಳಷ್ಟು ದೀರ್ಘ ಕಾಲದ ವ್ಯಾಪ್ತಿಯನ್ನು ಈ ಪ್ರಕರಣ ಹೊಂದಿದೆ. ಕುಟುಂಬ ದೂರು ದಾಖಲಿಸಿದ ಆರು ಜನರಲ್ಲದೆ ಇನ್ನೂ ಹಲವರು ಈ ಕೃತ್ಯದಲ್ಲಿ ಕೈಯ್ಯಾಡಿಸಿರುವ ಅನುಮಾನಗಳು ಸಾರ್ವಜನಿಕ ವಲಯದಲ್ಲಿದೆ ಎಂದು ನಾಗರಿಕ ಹೋರಾಟ ಸಮಿತಿ ತಿಳಿಸಿದೆ.

ಮುನೀರ್ ಕಾಟಿಪಳ್ಳ
ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ

ಮುಮ್ತಾಝ್ ಅಲಿ ಮುಸ್ಲಿಂ ಸಾಮಾಜಿಕ ರಂಗದಲ್ಲಿ ಮಾತ್ರವಲ್ಲದೆ, ಧಾರ್ಮಿಕ ವಲಯದಲ್ಲಿಯೂ ಪ್ರಭಾವಶಾಲಿ ವ್ಯಕ್ತಿತ್ವವಾಗಿ ಗುರುತಿಸಿಕೊಂಡಿದ್ದರು. ಅಲಿ ಕುಟುಂಬ ರಾಜಕೀಯವಾಗಿಯೂ, ಉದ್ಯಮ ವಲಯದಲ್ಲಿಯೂ ಪ್ರತಿಷ್ಟಿತ ಸ್ಥಾನಮಾನ ಹೊಂದಿದೆ‌. ಈ ಎಲ್ಲಾ ಅಂಶಗಳು, ಆರೋಪಿತರಲ್ಲಿ ಕೆಲವರ ಹಿನ್ನೆಲೆಗಳು ಸಾಮಾನ್ಯ ಒಂದು ಹನಿ ಟ್ರಾಪ್ ಅಲ್ಲ ಎಂಬ ಸಾರ್ವಜನಿಕ ವಲಯದ ಅನುಮಾನಗಳನ್ನು ಪುಷ್ಟಿಗೊಳಿಸುವಂತಿದೆ. ಮಮ್ತಾಜ್ ಅಲಿಯವರನ್ನು ಹಣಕಾಸಿನ ಬ್ಲಾಕ್ ಮೇಲ್ ಗೆ ಒಳಪಡಿಸಿದ ಸಂದರ್ಭ ದೊಡ್ಡ ಮೊತ್ತ ಪಾವತಿಯಾಗಿರುವ ಕುರಿತು ಕುಟಂಬವೇ ದೂರಿನಲ್ಲಿ ಒಪ್ಪಿಕೊಂಡಿದೆ. ಹಣ ಪಾವತಿಯ ತರುವಾಯವೂ ಬ್ಲ್ಯಾಕ್‌ಮೇಲ್ ಮುಂದುವರಿದದ್ದು, ಆಪ್ತ ಮಾತುಕತೆಗಳ ಆಡಿಯೋಗಳು ಆಯ್ದ ಕೆಲವು ಪ್ರತಿಷ್ಠಿತರಿಗೆ ತಲುಪಿರುವುದು ಪ್ರಕರಣ ಮೇಲ್ಕಂಡಷ್ಟು ಸರಳ ಅಲ್ಲ. ಹಣದ ಸುಲಿಗೆ ಮಾತ್ರ ಇವರ ಉದ್ದೇಶ ಆಗಿರಲಿಲ್ಲ ಎಂಬಂತೆ ಗೋಚರಿಸುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಪ್ರಕರಣದ ತನಿಖೆಯನ್ನು ವಿಶೇಷವಾಗಿ ಪರಿಗಣಿಸಬೇಕು. ಒತ್ತಡಗಳಿಗೆ ಮಣಿಯದ ದಕ್ಷ ಅಧಿಕಾರಿಗಳಿಗೆ ತನಿಖೆಯ ಹೊಣೆಗಾರಿಕೆ ನೀಡಬೇಕು ಎಂದು ಹೋರಾಟ ಸಮಿತಿ ಹೇಳಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಹಿಂದೂ ಮಾಲೀಕತ್ವದ ಶಾಲೆಗಳಿಗೆ ಮಾತ್ರ ಮಕ್ಕಳನ್ನು ಕಳುಹಿಸಬೇಕು; ದ್ವೇಷ ಬಿತ್ತಿದ ಪ್ರೊಫೆಸರ್!

ಹನಿಟ್ರ್ಯಾಪ್ ಪ್ರಕರಣಗಳು ಮಂಗಳೂರಿನಲ್ಲಿ ಸಾಮಾನ್ಯವಾಗುತ್ತಿದೆ‌. ಹಲವಾರು ಉದ್ಯಮಿಗಳು, ಪ್ರತಿಷ್ಠಿತರು ಇದರ ಬಲಿಪಶುಗಳಾಗಿದ್ದಾರೆ. ಲಕ್ಷ, ಕೋಟಿಗಳ ಲೆಕ್ಕದಲ್ಲಿ ಹಣ ಪಾವತಿಸಿ “ಸೆಟಲ್ ಮೆಂಟ್” ಮಾಡಿಕೊಂಡಿದ್ದಾರೆ. ಪೊಲೀಸ್ ದೂರುಗಳು ದಾಖಲಾಗದೆ ಪ್ರಕರಣಗಳು ಮುಚ್ಚಿಹೋಗಿವೆ. ಇದರಿಂದ ಹಲವು ಕುಟುಂಬಗಳು ನೆಮ್ಮದಿ ಕಳೆದು ಕೊಂಡು ಛಿದ್ರವಾಗಿವೆ ಎಂಬ ಪಿಸು ಮಾತುಗಳು ವರ್ಷಗಳಿಂದ ಚರ್ಚೆಯಲ್ಲಿವೆ. “ವೈಟ್ ಕಾಲರ್” ಸೋಗಿನ, ರಾಜಕೀಯ ಒಡನಾಟದ ಕೆಲವರು ಇಂತಹ ಪ್ರಕರಣಗಳ ಸೂತ್ರಧಾರರು ಎಂದು ಆರೋಪಗಳಿವೆ. ಮುಮ್ತಾಝ್ ಅಲಿ ಆತ್ಮಹತ್ಯೆ ಪ್ರಕರಣ ಸಮಾಜದಲ್ಲಿ ಉಂಟು ಮಾಡಿರುವ ತಲ್ಲಣಗಳನ್ನು ಗಮನಿಸಿಯಾದರೂ ಇಂತಹ ಜಾಲಗಳನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...