ಮಂಗಳೂರು | ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಕ್ಕೆ ಆಗ್ರಹ

Date:

ಸುರತ್ಕಲ್-ನಂತೂರು ಹೆದ್ದಾರಿ ಡಾಂಬರೀಕರಣಕ್ಕೆ ಟೆಂಡರ್ ಕುರಿತ ಸಂಸದರ ಹೇಳಿಕೆ ಸ್ವಾಗತಾರ್ಹ. ಆದರೆ ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಕುರಿತು ಮೌನ ಯಾಕೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಶ್ನಿಸಿದೆ.

- Advertisement -

ಈ ಕುರಿತು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಸಂಪೂರ್ಣ ಹದಗೆಟ್ಟಿರುವ ಸುರತ್ಕಲ್-ನಂತೂರು ರಾಷ್ಟ್ರೀಯ ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿಗೊಳಿಸಲು ಆಗ್ರಹಿಸಿ ‘ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ’ ಹಲವು ಸುತ್ತಿನ ಹೋರಾಟಗಳನ್ನು ನಡೆಸಿ ಸಂಸದರೂ ಸೇರಿದಂತೆ ಸಂಬಂಧಪಟ್ಟವರಿಗೆ ಮನವಿಗಳನ್ನು ಸಲ್ಲಿಸಿತ್ತು. ಈಗ ಸಂಸದ ಬ್ರಿಜೇಶ್ ಚೌಟರು ಸುರತ್ಕಲ್-ನಂತೂರು ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣಕ್ಕೆ ಟೆಂಡರ್ ಕರೆದಿರುವುದಾಗಿ ಹೇಳಿಕೆ ನೀಡಿದ್ದಾರೆ. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಈ ಬೆಳವಣಿಗೆಯನ್ನು ಸ್ವಾಗತಿಸಿದ್ದು, ಹರ್ಷ ವ್ಯಕ್ತಪಡಿಸಿದೆ. ಅದೇ ಸಂದರ್ಭ, ಡಾಂಬರೀಕರಣ ಕಾಮಗಾರಿ ಮಳೆಗಾಲಕ್ಕೆ ಮುಂಚಿತವಾಗಿ ಪೂರ್ಣಗೊಳ್ಳುವುದನ್ನು ಸಂಸದರು ಖಾತರಿ ಪಡಿಸಬೇಕು” ಎಂದು ಸಮಿತಿ ಪರವಾಗಿ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
ಮುನೀರ್‌ ಕಾಟಿಪಳ್ಳ

“ಈ ಹೆದ್ದಾರಿಗೆ ಸಂಬಂಧಿಸಿ ಮತ್ತೊಂದು ಬಹುಮುಖ್ಯ ಬೇಡಿಕೆಯಾದ ಕೂಳೂರು ಹೊಸ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸುವುದು, ನಂತೂರು ಮೇಲ್ಸೇತುವೆ ನಿರ್ಮಾಣಕ್ಕೆ ಕಾಲಮಿತಿ ನಿಗದಿಗೊಳಿಸುವ ವಿಷಯಗಳ ಕುರಿತು ಸಂಸದರುಏಕೆ ಮೌನ ವಹಿಸಿದ್ದಾರೆ” ಎಂದು ಪ್ರಶ್ನಿಸಿದರು.

“ಸುರತ್ಕಲ್-ನಂತೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ವಿನ್ಯಾಸವೇ ಅತ್ಯಂತ ಕಳಪೆಯಾಗಿದೆ. ಅದರ ಮೇಲೆ, ಈ ಹೆದ್ದಾರಿಯನ್ನು ಪೂರ್ಣಪ್ರಮಾಣದಲ್ಲಿ ದುರಸ್ತಿಗೊಳಿಸದೆ ಆರೇಳು ವರ್ಷಗಳು ದಾಟಿದೆ. ಮಳೆಗಾಲದಲ್ಲಿ ಸಾಲು ಸಾಲು ಗುಂಡಿಗಳು ನಿರ್ಮಾಣಗೊಂಡು ವಾಹನ ಸವಾರರ ಪಾಲಿಗೆ ಮಾರಣಾಂತಿಕವಾಗುತ್ತಿದೆ. ಕಳೆದ ಮಳೆಗಾಲದಲ್ಲೂ ಈ ಹೆದ್ದಾರಿ ಗುಂಡಿಗೆ ವಾಹನಗಳು ಬಿದ್ದು ಹಲವಾರು ಸಾವು ನೋವುಗಳು ಸಂಭವಿಸಿವೆ. ಈ ಕುರಿತು ಹೋರಾಟ ಸಮಿತಿ ಹಲವು ಸುತ್ತಿನ ಪ್ರತಿಭಟನೆ, ಧರಣಿಗಳನ್ನು ನಡೆಸಿ ಪೂರ್ಣ ಪ್ರಮಾಣದ ದುರಸ್ತಿಗೆ ಆಗ್ರಹಿಸುತ್ತ ಬಂದಿದೆ. ಕೊನೆಗೂ ಈಗ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿರುವುದು ಸಮಾಧಾನಕರ. ಆದರೆ, ಹೆದ್ದಾರಿ ಪ್ರಾಧಿಕಾರದ ಎಂದಿನ ಚಾಳಿಯಂತೆ ಪ್ರಕ್ರಿಯೆಗಳು ವಿಳಂಬಗೊಂಡರೆ ಮಳೆಗಾಲದಲ್ಲಿ ಗಂಭೀರ ಸಮಸ್ಯೆ ಎದುರಾಗಲಿದೆ. ಇಂತಹ ವಿಳಂಬ ನೀತಿಗೆ ಅವಕಾಶ ಕೊಡದೆ, ಮಳೆಗಾಲಕ್ಕೆ ಮುಂಚಿತವಾಗಿ ದುರಸ್ತಿ, ಡಾಂಬರೀಕರಣ ಪೂರ್ಣಗೊಳ್ಳುವುದನ್ನು ಖಾತರಿ ಪಡಿಸಬೇಕು” ಎಂದು ಸಂಸದರಿಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಂಟ್ವಾಳ | ಖಾಸಗಿ‌ ಬಸ್‌ಗಳದ್ದೇ ಕಾರುಬಾರು: ವಿಟ್ಲದಲ್ಲಿ ಮರೀಚಿಕೆಯಾಗಿಯೇ ಉಳಿದ ಸರ್ಕಾರಿ ಬಸ್‌ ಸೇವೆ!

“ಇದೇ ಹೆದ್ದಾರಿಯ ಭಾಗವಾಗಿರುವ ಕೂಳೂರು ಹೊಸ ಸೇತುವೆಯ ಕಾಮಗಾರಿ ಕುಂಟುತ್ತಿರುವುದು, ನಗರದ ವಾಹನ ದಟ್ಟಣೆಯ ಕೇಂದ್ರವಾಗಿ ರೂಪುಗೊಂಡಿರುವ ನಂತೂರಿನಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವ ಕುರಿತು ಸಂಸದರು ಕಾಳಜಿ ತೋರದಿರುವದು, ಮೌನ ವಹಿಸಿರುವುದು ನಿರಾಶದಾಯಕ. ಈ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರದಿದ್ದಲ್ಲಿ ಮತ್ತಷ್ಟು ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ” ಎಂದು ‘ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ‌ ಪರವಾಗಿ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...