ಮಂಗಳೂರು | ಯುವಕ ರಹಿಮಾನ್ ಕೊಲೆ ಪ್ರಕರಣ: ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಎಫ್‌ಐಆರ್

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ಬಾ ತಿವಿದು ಕಡಿದಿದ್ದಾರೆ. ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರಿನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ಬಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮೃತ ಅಬ್ದುಲ್ ರಹಿಮಾನ್ ಅವರು ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು ತೀವ್ರವಾಗಿ ಗಾಯಗೊಂಡ ಕಲಂದರ್ ಶಾಫಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಊರಿನ ಜನರೊಂದಿಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ‌.

ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳಿಂದ ಕೊಲೆಯತ್ನಕ್ಕೀಡಾಗಿದ್ದ ಕಲಂದರ್ ಶಾಫಿ ಅವರು ನೀಡಿದ ಮಾಹಿತಿ ಆಧರಿಸಿ ನಾಸೀರ್ ಅವರು ನೀಡಿದ ದೂರಿನಂತೆ ಬಂಟ್ವಾಳ‌ ಪೊಲೀಸರು ಭಾರತೀಯ ನ್ಯಾಯ‌ ಸಂಹಿತ ಕಾಯ್ದೆಯಡಿ 2023 (Uls-103, 109, 118(1), 118(2), 190, 191(1), 191(2), 191(3) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಆರೋಪಿಗಳ ಬಂಧನಕ್ಕಾಗಿ ಡಿವೈಎಸ್ಪಿ ವಿಜಯ ಪ್ರಕಾಶ್ ನೇತೃತ್ವದಲ್ಲಿ 5 ಪೊಲೀಸ್ ತಂಡಗಳು ರಚಿಸಲಾಗಿದೆ.
ಸದ್ಯ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳ ಮಾಹಿತಿ ಕಲೆಹಾಕಲಾಗಿದೆ ಎನ್ನಲಾಗಿದೆ.

ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ತಂಡ ಮತ್ತು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...