ಮಂಗಳೂರು | ಮುಸ್ಲಿಂ ಯುವಕನ ದೀಪಾವಳಿ ಸಂಭ್ರಮ; ಗೂಡುದೀಪ ತಯಾರಿಸಿ ಹಂಚಿದ ಅಶ್ಫಾಕ್

Date:

ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಗೂಡುದೀಪಗಳನ್ನು ಮಾಡುವವರೇ ಅತಿ ವಿರಳ. ಆದರೆ, ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿ ಅಶ್ಫಾಕ್ ಎಂಬವರು ದೀಪಾವಳಿ ಮತ್ತು ಗೂಡುದೀಪದ ಮೇಲೆ ಅತಿಯಾದ ಪ್ರೀತಿ ಇಟ್ಟುಕೊಂಡಿದ್ದಾರೆ. ಈ ಬಾರಿಯ ದೀಪಾವಳಿಗೆ ಒಟ್ಟು 17 ಸಾಂಪ್ರದಾಯಿಕ ಗೂಡುದೀಪಗಳನ್ನು ತಯಾರಿಸಿ, ತನ್ನ ಸ್ನೇಹಿತರಿಗೆ ಹಂಚಿದ್ದಾರೆ. ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಏಳಿಂಜೆ ಗ್ರಾಮದ ಕೋಂಜಾಲು ಗುತ್ತುವಿನ ನಿವಾಸಿ ಅಶ್ಫಾಕ್ ಮೂಲತಃ ಬಾಗಲಕೋಟೆಯವರು. ಸ್ಥಜೋಂಜಾಲು ಗುತ್ತಿವನ ಮೂಲ ನಿವಾಸಿ ಕೌಶಲ್ಯ ಶೆಟ್ಟಿ ಅವರ ಪೋಷಣೆಯಲ್ಲಿ ಅಶ್ಫಾಕ್‌ ವಾಸಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಅಶ್ವಾಕ್ ಅವರು ದೀಪಾವಳಿ ಸಮಯದಲ್ಲಿ ಬಳಸಲಾಗುವ ದೀಪಗಳನ್ನು ಗಮನಿಸುತ್ತಿದ್ದರು. ಇದೀಗ, ಅವರೇ ಸ್ವತಃ ಗೂಡುದೀಪಗಳನ್ನು ತಯಾರಿಸಿದ್ದಾರೆ. ಅವರ ಕೆಲಸವು ಕೋಮುಸೌಹಾರ್ದತೆಗೆ ಸಾಕ್ಷಿಯಾಗಿರುವ ಜತೆಗೆ, ಅಶ್ವಾಕ್ ಸ್ಥಳೀಯರ ಪ್ರೀತಿಗೆ ಪಾತ್ರರಾಗಿದ್ದಾರೆ.

ಮಂಗಳೂರು, ಮುಸ್ಲಿಂ, ದೀಪಾವಳಿ, ಸೌಹಾರ್ದ ದೀಪಾವಳಿ, ಗೂಡುದೀಪ, Mangalore, Muslim, Diwali, Friendly Diwali, GooduDeepa,

“ಅಶ್ವಾಕ್ ಕಳೆದ ಹಲವಾರು ವರ್ಷಗಳಿಂದ ಸಾಂಪ್ರದಾಯಿಕ ಗೂಡುದೀಪ ತಯಾರಿಸುತ್ತಿದ್ದಾರೆ. ಕಳೆದ ತಿಂಗಳು ರಜೆಯ ಸಮಯದಲ್ಲಿ ರಾತ್ರಿ-ಹಗಲು ಕುಳಿತು 17 ಸಾಂಪ್ರದಾಯಿಕ, ದೊಡ್ಡಗಾತ್ರದ ಗೂಡುದೀಪ ಸಿದ್ದಪಡಿಸಿದ್ದಾರೆ. ಆದರೆ, ಯಾವುದೇ ಗೂಡುದೀಪಗಳನ್ನು ಮಾರಾಟ ಮಾಡದೆ ತನ್ನ ಮಿತ್ರರಿಗೆ ಹಂಚಿ ಖುಷಿಪಟ್ಟಿದ್ದಾರೆ. ಕಲಾತ್ಮಕವಾದ ಎಲ್ಲ ಕೃತಿಗಳನ್ನೂ ಇವರು ಮಾಡುತ್ತಾರೆ. ಅಲ್ಲದೆ ಹೈನುಗಾರಿಕೆಯಲ್ಲೂ ತೊಡಗಿಸಿರುವ ಅಶ್ಫಾಕ್ ದನ ಸಾಕಾಣಿಕೆಯಲ್ಲಿ ಆಸಕ್ತಿ ಹೊಂದಿದ್ದಾರೆ” ಎಂದು ಕೌಶಲ್ಯ ಶೆಟ್ಟಿ ಹೇಳಿದ್ದಾರೆ.

“ಹಿಂದಿನಿಂದಲೂ ಅಪಾರ ಆಸಕ್ತಿ ಇತ್ತು. ಮಕ್ಕಳ ಸಹಕಾರದಿಂದ ಸಾಂಪ್ರದಾಯಿಕ ಗೂಡುದೀಪ ತಯಾರಿಕೆಯಲ್ಲಿ ತೊಡಗಿದೆ. ಕೌಶಲ್ಯ ಶೆಟ್ಟಿಯವರ ಪ್ರೋತ್ಸಾಹದಿಂದ ಇದು ಸಾಧ್ಯವಾಯಿತು” ಎಂದು ಎಂಜಿನಿಯರಿಂಗ್ ವಿದ್ಯಾರ್ಥಿ ಅಶ್ಫಾಕ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...