ಯುವಜನರಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪುತ್ತೂರು ತಾಲೂಕು ಪಡವನ್ನೂರಿನ ಪದಡ್ಕದಲ್ಲಿ ನವವಿವಾಹಿತೆ ಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪುಷ್ಪಾ ಮೃತ ಯುವತಿ.
ಪುಷ್ಪಾ ಅವರಿಗೆ ಮಂಗಳವಾರ (ನ.07) ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಕೂಡಲೇ ಪುಷ್ಪಾಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಯಿದಿದ್ದರು. ಆದರೆ, ಅವರು ಮಾರ್ಗಮಧ್ಯೆ ಮೃತಪಟ್ಟರು ಎಂದು ಕುಟಂಬಸ್ಥರು ಹೇಳಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಪುಷ್ಪಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು ಎರಡು ಕುಟುಂಬಗಳಲ್ಲಿ ದುಃಖ ಮಡುಗಟ್ಟಿದೆ.