ಮಂಗಳೂರು | ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ: ಓರ್ವ ಮೃತ್ಯು; ಮತ್ತೋರ್ವ ಗಂಭೀರ

Date:

ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಶುಕ್ರವಾರ ಸಂಜೆ ನಡೆದಿದೆ.

- Advertisement -

ಮೃತಪಟ್ಟಿರುವ ಬೈಕ್ ಸವಾರನನ್ನು ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಎಂದು ಗುರುತಿಸಲಾಗಿದ್ದು, ಗಾಯಗೊಂಡಿರುವ ಸಹ ಸವಾರನನ್ನು ಮೊಹಮ್ಮದ್ ಶಕೀರ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಂಭೀರ ಗಾಯಗೊಂಡಿರುವ ಸಹ ಸವಾರ ಶಾಕೀರ್ ಪಂಪ್‌ವೆಲ್‌ ಬಳಿ ಇರುವ ಇಂಡಿಯಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2024 11 01 at 7.49.46 PM
ಸಲ್ಮಾನ್ ಫಾರಿಶ್

“KA 19 HS 1113 ನೋಂದಣಿ ಸಂಖ್ಯೆಯ ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬರುತ್ತಾ, ಸಂಜೆ 4.50 ಗಂಟೆಗೆ ಮಹಾಕಾಳಿ ಪಡ್ಪು ಬಳಿ ಮೋಟಾರ್ ಸೈಕಲ್ ಸ್ಕಿಡ್ ಆಗಿದೆ. ಈ ವೇಳೆ ನೇತ್ರಾವತಿ ಸೇತುವೆಗೆ ಅಳವಡಿಸಿದ್ದ ಕಬ್ಬಿಣದ ತಗಡು ಶೀಟ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಕೂಡಲೇ ಇಬ್ಬರನ್ನು ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದರು. ಈ ಪೈಕಿ ಗಂಭೀರ ಗಾಯಗೊಂಡಿದ್ದ ಸಲ್ಮಾನ್ ಫಾರಿಶ್ ಆಸ್ಪತ್ರೆಯಲ್ಲಿ ನಿಧನರಾದರು. ಗಾಯಗೊಂಡಿರುವ ಶಕೀರ್ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಸಾಗರ | ಆಟೋ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

ಅಪಘಾತದಲ್ಲಿ ಮೃತಪಟ್ಟಿರುವ ಸಲ್ಮಾನ್ ಫಾರಿಶ್ ಅವರ ಮೃತದೇಹವು ಮಂಗಳೂರು ಜಿಲ್ಲಾ ವೆನ್ಲಾಕ್ ಶವಗಾರದಲ್ಲಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಲಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...